ಬೆಂಗಳೂರು : ಇತ್ತೀಚಿಗೆ ಎಲ್ಲೆಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಅದರಲ್ಲೂ ಮಕ್ಕಳ ಮೇಲೆ ನಾಯಿಗಳು ದಾಳಿ ಮಾಡುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ಶಾಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ.
ಹೌದು ಶಾಲಾ ಬಾಲಕನ ಬೆಲೆ ಬೀದಿ ನಾಯಿಗಳು ದಾಳಿ ಮಾಡಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ಈ ಒಂದು ಘಟನೆ ನಡೆದಿದೆ. ಕೂದಲೇಳೆ ಅಂತರದಲ್ಲಿ ಶ್ವಾನ ದಾಳಿಯಿಂದ ಬಾಲಕ ಪಾರಾಗಿದ್ದಾನೆ. ನಾಯಿಗಳ ದಾಳಿಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಬೆಳಿಗ್ಗೆ ಶಾಲೆಗೆ ನಡೆದುಕೊಂಡು ಹೋಗುವಾಗ ಬಾಲಕನ ಮೇಲೆ ನಾಯಿ ದಾಳಿ ಮಾಡಿದೆ. ಏಕಾಎಕಿ ಎರಡು ಬೀದಿ ನಾಯಿಗಳು ಬಾಲಕನ ಮೇಲೆ ದಾಳಿ ಮಾಡಿವೆ. ಕೂಡಲೇ ಬಾಲಕ 2 ನಾಯಿಗಳನ್ನು ಶಾಲಾ ಬಾಲಕ ಬೆದರಿಸಿ ಓಡಿಸಿದ್ದಾನೆ.








