ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಭೂ ಮಾಲೀಕ ದೇವರಾಜು ಒಳಗೊಂಡಂತೆ ಅನೇಕರನ್ನು ವಿಚಾರಣೆಗೆ ಒಳಪಡಿಸಿದೆ. ಈ ನೆಲೆಯಲ್ಲಿ ಇಂದು ಹೈಕೋರ್ಟ್ ಗೆ ಲೋಕಾಯುಕ್ತ ಅಧಿಕಾರಿಗಳುತನಿಖಾ ವರದಿಯನ್ನು ಸಲ್ಲಿಸಲಿದ್ದರೆ.
ಇದೆ ವೇಳೆ ಮುಡಾ ಹಗರಣವನ್ನು ಸಿಬಿಐಗೆ ವಹಿಸುವಂತೆ ಅರ್ಜಿ ಸಲ್ಲಿಸಲಾಗಿದ್ದು, ನಾಳೆ ಹೈಕೋರ್ಟ್ ನಲ್ಲಿ ಈ ಒಂದು ಅರ್ಜಿಯ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಕೋರ್ಟ್ ಗೆ ಮಧ್ಯಂತರ ವರದಿ ಸಲ್ಲಿಕೆ ಮಾಡಲಾಗುತ್ತದೆ.ಲೋಕಾಯುಕ್ತ ಪೊಲೀಸರು ಮಧ್ಯಂತರ ಪ್ರಗತಿಯ ತನಿಖಾ ವರದಿ ಸಲ್ಲಿಸಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಪ್ರಭಾವದ ಬಗ್ಗೆ ಲೋಕಯುಕ್ತ ಅಧಿಕಾರಿಗಳು ಇದೀಗ ತನಿಖೆ ನಡೆಸಿದ್ದಾರೆ. ಸಿಎಂ ಪತ್ನಿ ಪಾರ್ವತಿ ಅವರು ಪಡೆದಿರುವ 14 ಸೈಟ್ಗಳ ಬಗ್ಗೆ ಕೂಡ ತನಿಖೆ ನಡೆಸಿದ್ದಾರೆ. ತನಿಖೆ ಸಂಬಂಧ ಇದುವರೆಗೆ ಸಿದ್ದರಾಮಯ್ಯ ಅವರನ್ನು ಕೂಡ ವಿಚಾರಣೆgs ಒಳಪಡಿಸಿದ್ದಾರೆ. ಹಾಗಾಗಿ ಮಧ್ಯಂತರ ತನಿಖಾ ಪ್ರಗತಿಯ ವರದಿಯನ್ನು ಇಂದು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ.








