ಬೆಂಗಳೂರು: ನಗರದಲ್ಲಿ ಡ್ರಿಂಕ್ ಅಂಡ್ ಡ್ರೈವ್ ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆಗೆ ಇಳಿದಿದ್ದಾರೆ. ಈ ಕಾರ್ಯಾಚರಣೆಯ ವೇಳೆಯಲ್ಲಿ ಕುಡಿದು ವಾಹನ ಚಾಲನೆ ಮಾಡಿದಂತ 177 ಮಂದಿ ವಿರುದ್ಧ ಕೇಸ್ ದಾಖಲಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನ ಪೂರ್ವ ವಿಭಾಗದ ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ದಿನಾಂಕ 21-11-2024ರಿಂದ 24-11-2024ರವರೆಗೆ ಸಂಚಾರ ಪೂರ್ವ ವಿಭಾಗದ ಸಂಚಾರ ಪೊಲೀಸ್ ಠಾಣಾ ಸರಹದ್ದುಗಳಲ್ಲಿ ಮದ್ಯಪಾನ ಮಾಡಿ ವಾಹನಗಳನ್ನು ಚಾಲನೆ ಮಾಡುವ ಚಾಲಕ, ಸವಾರರುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಯಿತು ಎಂದಿದ್ದಾರೆ.
ಸುಮಾರು 19,400 ವಾಹನಗಳನ್ನು ತಪಾಸಣೆ ಮಾಡಿ 177 ಪ್ರಕರಣಗಳನ್ನು ದಾಖಲು ಮಾಡವ ಜೊತೆಗೆ ಡ್ರೈವಿಂಗ್ ಲೈಸೆನ್ಸ್ ಜಪ್ತಿ ಪಡಿಸಿಕೊಂಡು, ಸಂಬಂಧ ಪಟ್ಟ ಪ್ರಾದೇಶಿಕ ಸಾರಿಗೆ ಕಚೇರಿಗೆ ಅಮಾನತ್ತು ಪಡಿಸಲು ಕಳುಹಿಸಿಕೊಡಲಾಗಿರುತ್ತದೆ ಎಂದಿದ್ದಾರೆ.
ಈ ಹಿನ್ನಲೆಯಲ್ಲಿ ವಾಹನ ಸವಾವರು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಹಾಗೂ ಸಂಚಾರ ನಿಯಮಗಳ ಮಹತ್ವ ತಿಳಿಯುವಂತೆ ಮನವಿ ಮಾಡಲಾಗಿದೆ. ಇನ್ನೂ ಸಂಚಾರ ನಿಯಮ ಮೀರುವವರ ವಿರುದ್ಧ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಎಚ್ಚರಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಬೆಂಬಲದಿಂದ ಬಿಜೆಪಿ ಗೆದ್ದಿದೆ ಅಂದ್ರೆ ಡಿಕೆಶಿ ಒಪ್ಪುವರೇ?: ಛಲವಾದಿ ನಾರಾಯಣಸ್ವಾಮಿ