ಬೆಂಗಳೂರು: ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ಸೇರಿದಂತೆ ವಿವಿಧ ವಿಚಾರಗಳನ್ನು ಚರ್ಚಿಸಲು ನವೆಂಬರ್.28ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ.
ಈ ಬಗ್ಗೆ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ: 28.11.2024 ರಂದು ಬೆಳಿಗ್ಗೆ 11:00 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 24ನೇ ಸಭೆಯು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ನಡೆಯಲಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನ.28ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ, ಹಣಕಾಸು ಮಂಜೂರು ಸೇರಿದಂತೆ ವಿವಿಧ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ.