ಬೆಂಗಳೂರು : ಶಿಗ್ಗಾವಿ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಬಂಡಾಯವೆದಿದ್ದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿಗೆ ಇದೀಗ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯ ಅಧ್ಯಕ್ಷರನ್ನಾಗಿ ಸರ್ಕಾರ ನೇಮಕ ಮಾಡಿದೆ.
ಶಿಗ್ಗಾವಿ ಉಪಚುನಾವಣೆ ಗೆಲುವಿನ ಬೆನ್ನಲ್ಲೇ ಅಜ್ಜಂಪಿರ್ ಖಾದ್ರಿಗೆ ಬಿಗ್ ಗಿಫ್ಟ್ ಸಿಕ್ಕಿದೆ. ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಅಧ್ಯಕ್ಷರಾಗಿ ಇದೀಗ ಖಾದ್ರಿ ಇದೀಗ ನೇಮಕಗೊಂಡಿದ್ದಾರೆ. ಶಿಗ್ಗಾವಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸಿಎಂ ಸಿದ್ದರಾಮಯ್ಯ ಬಂಡಾಯವೇದಿದ್ದ ಅಜ್ಜಂಪಿರ್ ಖಾದ್ರಿಗೆ ಭರವಸೆ ನೀಡಿದ್ದರು. ಹೀಗಾಗಿ ಖಾದ್ರಿಗೆ ಹುದ್ದೆ ನೀಡಿ ಸಿಎಂ ಸಿದ್ದರಾಮಯ್ಯ ಮಾತು ಉಳಿಸಿಕೊಂಡಿದ್ದಾರೆ.
ಹೀಗಾಗಿ ಅಜ್ಜಂಪೀರ್ ಖಾದ್ರಿಗೆ ಸಿಎಂ ಸಿದ್ದರಾಮಯ್ಯ ಪ್ರಮುಖವಾದ ಹುದ್ದೆ ನೀಡಿ ಇದೀಗ ಮಾತು ಉಳಿಸಿಕೊಂಡಿದ್ದಾರೆ. ಇನ್ನು ಶಿಗ್ಗಾವಿ ಉಪಚುನಾವಣೆಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಬಿಜೆಪಿ ಪರವಾಗಿ ಸ್ಪರ್ಧಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಪಠಾಣ್ ಖಾನ್ ಸ್ಪರ್ಧಿಸಿ ಭರತ್ ಬೊಮ್ಮಾಯಿ ವಿರುದ್ಧ ಗೆದ್ದಿದ್ದಾರೆ.