ಕನ್ನಡ ಮತ್ತು ಸಂಸ್ಕøತಿ ಇಲಾಖೆ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾμÉಗಳ ಕೇಂದ್ರ ಸಂಸ್ಥೆಗಳು ಒಂದಾಗಿ ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲ ಸರ್ಕಾರಿ ನೌಕರರಿಗಾಗಿ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯನ್ನು ನಡೆಸುತ್ತಿದ್ದು, ರಾಜ್ಯದ ಎಲ್ಲ ನಗರಸಭೆ, ಕವಿಪ್ರನಿನಿ, ಕೆಎಸ್ಸಾರ್ಟಿಸಿ, ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳ ನೌಕರರು ಸಹ ಹೆಸರು ನೋಂದಾಯಿಸಿಕೊಳ್ಳಬಹುದು.
ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ಹೆಸರು ನೋಂದಾಯಿಸಿಕೊಂಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ಸರ್ಕಾರದ ಅಧಿಸೂಚನೆಯಂತೆ ವಿನಾಯಿತಿ ಇರುತ್ತದೆ.
ಈ ಯೋಜನೆಯನ್ನು ಸಾರ್ವಜನಿಕರಿಗೂ ವಿಸ್ತರಿಸಲಾಗಿದ್ದು, ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ, 18 ರಿಂದ 60 ವರ್ಷದೊಳಗಿನ ಆಸಕ್ತರು ಅರ್ಜಿ ಭರ್ತಿ ಮಾಡಿ ಜೊತೆಯಲ್ಲಿ 250 ರೂ. ಡಿಮ್ಯಾಂಡ್ ಡ್ರಾಪ್ಟನ್ನು ಕಳುಹಿಸಿಕೊಡಬೇಕು. ನೋಂದಣಿತರಿಗೆ ಇಪ್ಪತ್ತು ಪಾಠಾವಳಿಗಳನ್ನು ಕಳುಹಿಸಿಕೊಡಲಾಗುತ್ತದೆ. ತರಬೇತಿ ಮತ್ತು ಸಂಪರ್ಕ ಶಿಬಿರದ ಕೊನೆಯಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ.
ಮೂವತ್ತೆಂಟನೆಯ ತಂಡದ ತರಬೇತಿಯು ಆರಂಭವಾಗಲಿದ್ದು. ಅರ್ಜಿ ನಮೂನೆಯನ್ನು ಪ್ರಭಾರ ಅಧಿಕಾರಿ, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾμÉಗಳ ಕೇಂದ್ರ ಸಂಸ್ಥೆ ಮಾನಸಗಂಗೋತ್ರಿ ಇವರಿಗೆ 5 ರೂಪಾಯಿ ಅಂಚೆ ಚೀಟಿಯನ್ನು ಹಚ್ಚಿದ ಸ್ವವಿಳಾಸದ ಲಕೋಟಿಯನ್ನು ಕಳುಹಿಸಿ ಪಡೆದುಕೊಂಡು ನವೆಂಬರ್ .30 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ.0821-234528 ಗೆ ಕರೆ ಮಾಡಿ ಸಂಪರ್ಕಿಸಬಹುದು.