ಬೆಂಗಳೂರು : ಮುಡಾ ಅಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಾಗೂ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಿದ್ದು, ದೂರುದಾರ ಸ್ನೇಹಮಯಿ ಕೃಷ್ಣ ಅವರು, ಲೋಕಾಯುಕ್ತದ ತನಿಖೆಯ ಮೇಲೆ ನಂಬಿಕೆ ಇಲ್ಲ ಎಂದು ಹೈಕೋರ್ಟಿಗೆ ಸಿಬಿಐ ತನಿಖೆ ನಡೆಸಬೇಕೆಂದು ಅರ್ಜಿ ಸಲ್ಲಿಸಿದ್ದರು.ಇದೀಗ ಇಂದು ಹೈಕೋರ್ಟ್ ನಲ್ಲಿ ಸಿಬಿಐ ತನಿಖೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಯಲಿದೆ.
ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ಹಾಜರಾಗಿದ್ದರು. ಅಲ್ಲದೆ ಪತ್ನಿ ಪಾರ್ವತಿ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಭೂಮಾಲಿಕ ದೇವರಾಜು ಅವರು ಕೂಡ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು.ಹಾಗಾಗಿ ಇಂದು ನಡೆಯುವ ವಿಚಾರಣೆ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಪರ ವಕೀಲರು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ ಅರ್ಜಿಯನ್ನು ವಜಾ ಗೊಳಿಸಬೇಕು ಎಂದು ಮನವಿ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಆಯುಕ್ತರು ಕಳಾದಂತಹ ನಟೇಶ್ ಹಾಗೂ ದಿನೇಶ್ ಕುಮಾರ್ ಅವರನ್ನು ಕೂಡ ಲೋಕಾಯುಕ್ತ ಗ್ರಿಲ್ ನಡೆಸಿತ್ತು.ಅಲ್ಲದೆ ಇಡಿ ಅಧಿಕಾರಿಗಳು ಕೂಡ ಈ ಇಬ್ಬರನ್ನು ವಿಚಾರಣೆಗೆ ಒಳಪಡಿಸಿದ್ದರು. ಹಾಗಾಗಿ ಇಂದು ಹೈ ಕೋರ್ಟ್ ನಲ್ಲಿ ನಡೆಯುವಂತಹ ವಿಚಾರಣೆ ಹಾಗೂ ಹೈ ಕೋರ್ಟಿನ ತೀರ್ಪು ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಜೀವನ ತಿರುವು ಪಡೆದುಕೊಳ್ಳುತ್ತದೆ ಎನ್ನಲಾಗಿದೆ.