ಬೆಂಗಳೂರು : ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಇದೀಗ ಸರ್ಕಾರಿ ಶಾಲಾ ಶಿಕ್ಷಕನೊಬ್ಬನನ್ನು ಅರೆಸ್ಟ್ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ.
ಬಂಧಿತ ಶಿಕ್ಷಕನನ್ನು ಮಂಜುನಾಥ ಎಂದು ಗುರುತಿಸಲಾಗಿದ್ದು, ಈತ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕು ನೀಡುತ್ತಿದ್ದ ಎಂದು ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಗಂಭೀರವಾದ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಈತನ ವಿರುದ್ಧ ಎಫ್ಐಆರ್ ಕೂಡ ಇದೀಗ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರ ಪೋಷಕರು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮೊರೆ ಹೋಗಿದ್ದರು. ಆಯೋಗದ ಸಹಾಯವಾಣಿಗೆ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿ ಶಿಕ್ಷಕ ಮಂಜುನಾಥ್ ನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.