ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆನ್ನು ನೋವಿನ ಕಾರಣ ತಿಳಿಸಿ ಅನುಕಂಪದ ಆಧಾರದ ಮೇಲೆ ನಟ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದುಕೊಂಡು ಜೈಲಿನಿಂದ ಬಿಡುಗಡೆಯಾಗಿದ್ದರು. ಬಳಿಕ ಬೆನ್ನು ನೋವಿಗೆ ಚಿಕಿತ್ಸೆ ಪಡೆದುಕೊಳ್ಳಲು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು.
ಆದರೆ ಇದುವರೆಗೂ ನಟ ದರ್ಶನ್ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ. ಹಾಗಾಗಿ ಇಂದು ಹೈಕೋರ್ಟ್ ನಲ್ಲಿ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗದಕ್ಕೆ ಸೂಕ್ತ ಕಾರಣ ತಿಳಿಸದಿದ್ದರೆ ಅವರ ಜಾಮೀನು ರದ್ದಾಗಲಿದೆ. ಆಸ್ಪತ್ರೆಗೆ ದಾಖಲಾಗಿ ಇಷ್ಟು ದಿನ ಕಳೆದರೂ ಕೂಡ ನಟ ದರ್ಶನ್ ಅವರು ಬೆನ್ನು ನೋವಿನ ಸರ್ಜಾರಿಗೆ ಒಳಗಾಗಿಲ್ಲ. ಹಾಗಾಗಿ ಇಂದು ಹೈ ಕೋರ್ಟ್ನಲ್ಲಿ ನಡೆಯುವ ವಿಚಾರಣೆ ಬಹಳ ಮಹತ್ವ ಪಡೆದುಕೊಂಡಿದೆ.
ಅಲ್ಲದೆ ಇತ್ತೀಚಿಗೆ ಕೊಲೆ ನಡೆದ ಸ್ಥಳದಲ್ಲಿ ನಟ ದರ್ಶನ್ ಅವರೊಂದಿಗೆ ಇತರೆ ಆರೋಪಿಗಳು ಫೋಟೋ ತೆಗೆಸಿಕೊಂಡಿರುವ ಕುರಿತು ಮಹತ್ವದ ಸಾಕ್ಷಿಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಆರೋಪಿಗಳ ಮೊಬೈಲ್ ಗಳನ್ನು ಪೊಲೀಸರು ಎಫ್ ಎಸ್ ಎಲ್ ಗೆ ಕಳುಹಿಸಿ ರಿಟ್ರಿವ್ ಮಾಡಿಸಿ ಹಲವು ಮಹತ್ವದ ಸಾಕ್ಷಿಗಳನ್ನು ಸಂಗ್ರಹಿಸಿ, ನ್ಯಾಯಾಲಯಕ್ಕೆ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಹಾಗಾಗಿ ಹೈಕೋರ್ಟ್ ನಲ್ಲಿ ಇಂದು ನ್ಯಾಯ ಎಸ್ ವಿಶ್ವಜೀತ್ ಶೆಟ್ಟಿ ಅವರಿಂದ ಪೀಠದಲ್ಲಿ ನಟ ದರ್ಶನ್ ಅವರ ಜಾಮೀನು ಅರ್ಜಿ ಕುರಿತಂತೆ ವಿಚಾರಣೆ ನಡೆಯಲಿದೆ. ಒಂದು ವೇಳೆ ಶಸ್ತ್ರಚಿಕಿತ್ಸೆಯ ಕುರಿತಂತೆ ಸೂಕ್ತವಾದ ಕಾರಣಗಳನ್ನು ನೀಡದೆ ಹೋದರೆ, ನಟ ದರ್ಶನ್ ಅವರ ಮಧ್ಯಂತರ ಜಾಮೀನು ರದ್ದಾಗಲಿದ್ದು, ಬಳಿಕ ಅವರು ಮತ್ತೆ ಜೈಲಿಗೆ ಹೋಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.