ಬೆಂಗಳೂರು : ಮುಡಾದಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಆರ್ಟಿಐ ಕಾರ್ಯಕರ್ತ ಗಂಗರಾಜು ಆರೋಪಿಸಿದ್ದರು. ಈ ಒಂದು ಆರೋಪದ ಹಿನ್ನೆಲೆಯಲ್ಲಿ ಇದೀಗ ಜಾರಿ ನಿರ್ದೇಶನಲಯದ ಅಧಿಕಾರಿಗಳು ಗಂಗರಾಜುಗೆ ನೋಟಿಸಿ ನೀಡಿದ್ದಾರೆ.
ಹೌದು ಮುಡಾದಲ್ಲಿ ಸೈಟ್ ಹಂಚಿಕೆ ವಿಚಾರವಾಗಿ ಸಾವಿರಾರು ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು ಆರ್ಟಿಐ ಕಾರ್ಯಕರ್ತ ಗಂಗರಾಜು ಅವರು ಆರೋಪಿಸಿದ್ದರು. ಹಾಗಾಗಿ ಮಾಹಿತಿ ನೀಡಲು ಬೆಂಗಳೂರಿನ ಕಚೇರಿಗೆ ಬರುವಂತೆ ಇಡಿ ನೋಟಿಸ್ ನೀಡಿ ಸೂಚನೆ ನೀಡಿದೆ. ದೂರವಾಣಿ ಕರೆ ಮಾಡಿ ನಾಳೆ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಈ ಹಿಂದೆ ಅಕ್ಟೋಬರ್ 28 ರಂದು ಇಡಿ ಕಚೇರಿಗೆ ಗಂಗರಾಜು ವಿಚಾರಣೆಗೆ ತೆರಳಿದ್ದರು.ಇಂದು ಕೂಡ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರ್ಟಿಐ ಕಾರ್ಯಕರ್ತ ಗಂಗರಾಜು ಅವರಿಗೆ ದೂರವಾಣಿ ಕರೆ ಮಾಡುವ ಮೂಲಕ ನಾಳೆ ವಿಚಾರಣೆಗೆ ಬರುವಂತೆ ಸೂಚನೆ ನೀಡಿದ್ದಾರೆ.