ಬೆಂಗಳೂರು : ನಗರದಲ್ಲಿನ ಸಾರ್ವಜನಿಕ ಉದ್ಯಾನಗಳ ಸ್ವಚ್ಛತೆ ಕಾಯ್ದುಕೊಳ್ಳಲು ಹಲವು ಮಾರ್ಗ ಸೂಚಿ ರಚಿಸಿರುವ ಹೈಕೋರ್ಟ್, ಉದ್ಯಾನಗಳಲ್ಲಿ ನಾಯಿಗಳ ಮಲವಿಸರ್ಜನೆಗೆ ಕಾರಣವಾಗು ವವರಿಗೆ ಹೆಚ್ಚಿನ ದಂಡ ವಿಧಿಸಲು ತೋಟಗಾರಿಕೆ ಇಲಾಖೆ ಮತ್ತು ಬಿಬಿಎಂಪಿಗೆ ಕಟ್ಟುನಿಟ್ಟಿನ ಆದೇಶ ಮಾಡಿದೆ.
ಹೌದು ನಗರದ ಸಾರ್ವಜನಿಕ ಉದ್ಯಾನಗಳಲ್ಲಿ ಸಾಕು ನಾಯಿಗಳಿಂದ ಉಂಟಾಗುತ್ತಿರುವ ಉಪದ್ರವ ಹಾಗೂ ನಾಯಿಗಳ ಮಲ ವಿಸರ್ಜನೆಗೆ ಕಡಿವಾಣ ಹಾಕಲು ಬಿಬಿಎಂಪಿ ಹಾಗೂ ಸರ್ಕಾರಕ್ಕೆ ಸೂಚಿಸುವಂತೆ ಕೋರಿ ಸರ್ಕಾರೇತರ ಸಂಘ ‘ಮೆಸೆರ್ಸ್‌ಂಪ್ಯಾಷನ್ ಅನ್ಸಿಮಿಟೆಡ್ ಪ್ಲಸ್ ಅಕ್ಷನ್’ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದಮುಖ್ಯನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಮಾರ್ಗಸೂಚಿ ರಚಿಸಿದೆ.
ಬೇಜವಾಬ್ದಾರಿಯುತವಾಗಿ ಸಾಕು ಪ್ರಾಣಿಗಳ ಪ್ರವೇಶಕ್ಕೆ ಅವಕಾಶ ನೀಡುತ್ತಿರು ವುದರಿಂದ ಸಾರ್ವಜನಿಕ ಉದ್ಯಾನಗಳಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಲು ತೋಟ ಗಾರಿಕೆ ಇಲಾಖೆ, ಬಿಬಿಎಂಪಿ ಅಧಿಕಾರಿಗಳು, ಸಿಬ್ಬಂದಿ ವಿಫಲರಾಗಿದ್ದಾರೆ. ಈ ಬಗ್ಗೆ ಜನರಿಂದ 1288 ದೂರು ದಾಖಲಾಗಿವೆ.
ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇರೀತಿ ಉಪದ್ರವ ಉಂಟಾಗದಂತೆ ನಿಷೇಧಿಸುವ ಅವಕಾಶವಿದ್ದರೂ ಅವುಗಳನ್ನು ಜಾರಿ ಮಾಡುವ ಇಚ್ಛಾಶಕ್ತಿ ತೋರುತ್ತಿಲ್ಲ ಎಂಬ ಅರ್ಜಿದಾರರವಾದ ಪರಿಗಣಿಸಿದ ಹೈಕೋರ್ಟ್, ನಾಯಿಗಳ ವಿಕೃತ ನಡೆ ಯಿಂದ ಉದ್ಯಾನಕ್ಕೆ ಭೇಟಿ ನೀಡುವವರಿಗೆ ರಕ್ಷಣೆ ನೀಡಬೇಕಿದೆ. ಸಾರ್ವಜನಿಕ ಉದ್ಯಾನ ಗಳಲ್ಲಿ ಎಲ್ಲ ರೀತಿಯ ಸಚ್ಛತೆ ಕಾಯ್ದುಕೊಳ್ಳುವುದು ಕಡ್ಡಾಯ ಎಂದು ಆದೇಶಿಸಿದೆ.