ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಂಘಟನೆಗಳು, ಕಾರ್ಮಿಕ ಪ್ರತಿನಿಧಿಗಳು, ಆಡಳಿತ ವರ್ಗಗಳು ಹಾಗೂ ಸಾರ್ವಜನಿಕರಿಂದ ಮಹಿಳಾ ಕಾರ್ಮಿಕರಿಗೆ ಅವರ ಋತುಚಕ್ರದ ಸಮಯದಲ್ಲಿ ಬಳಸಿಕೊಳ್ಳಲು ವಾರ್ಷಿಕ 6 ದಿನಗಳ ವೇತನ ಸಹಿತ ಋತುಸ್ರಾವ ರಜೆ ಮಂಜೂರು ಮಾಡುವ ನೀತಿಯ ಕುರಿತು ಸಲಹೆ / ಸೂಚನೆ / ಆಕ್ಷೇಪಣೆ / ಅಭಿಪ್ರಾಯಗಳನ್ನು ಲಗತ್ತಿಸಿರುವ ನಮೂನೆಯಲ್ಲಿ ಭರ್ತಿಮಾಡಿ ವೆಬ್‍ಸೈಟ್‍ನಲ್ಲಿ ಅಳವಡಿಸಲಾದ ನಮೂನೆಯಲ್ಲಿ dicbangalore@gmail.com ಗೆ 30 ದಿನಗಳೊಳಗಾಗಿ ಕಳುಹಿಸಬೇಕೆಂದು ಕಾರ್ಮಿಕ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.
ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಖಾನೆಗಳು, ಕೈಗಾರಿಕೆಗಳು, ಗಾಮೆರ್ಂಟ್ಸ್ ಬಹುರಾಷ್ಟ್ರೀಯ ಕಂಪೆನಿಗಳು, ಮಾಹಿತಿ ತಂತ್ರಜ್ಞಾನ ಕ್ಷೇತ್ರ ಸೇರಿದಂತೆ ವಿವಿಧ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಕಾರ್ಮಿಕರ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿ ಅವರ ಮನೋಸ್ಥೆರ್ಯವನ್ನು ಹೆಚ್ಚಿಸಲು ಮಾಸಿಕ ಋತುಚಕ್ರದ ಸಮಯದಲ್ಲಿ ವೇತನ ಸಹಿತ ರಜೆಯನ್ನು ಮಂಜೂರು ಮಾಡಲು ಅಧಿಸೂಚನೆ ಹೊರಡಿಸುವ ಸಂಬಂಧ ಚರ್ಚಿಸಿ ವರದಿ ಸಲ್ಲಿಸಲು ಕ್ರೈಸ್ಟ್ ಯೂನಿವರ್ಸಿಟಿಯ ಸ್ಕೂಲ್ ಆಫ್ ಲಾ, ಪೆÇ್ರಫೆಸರ್ ಹಾಗೂ ಹೆಚ್.ಓ.ಡಿ ಡಾ.ಸಪ್ನ ಮೋಹನ್ ಅವರ ಅಧ್ಯಕ್ಷತೆಯಲ್ಲಿ ಇಲಾಖೆಯ ವಿವಿಧ ಸ್ತರದ ಅಧಿಕಾರಿಗಳು ವೈದ್ಯರುಗಳು ಮಾಲೀಕರು ಮತ್ತು ಕಾರ್ಮಿಕ ವರ್ಗಗಳ ಪ್ರತಿನಿಧಿಗಳು, ಪ್ರಾಧ್ಯಾಪಕರು, ಸಮಾಜ ಸೇವಕರು ಮೊದಲಾದ ಸದಸ್ಯರುಗಳನ್ನೊಳಗೊಂಡ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿಯು ವಿವಿಧ ಹಂತಗಳಲ್ಲಿ ಚರ್ಚಿಸಿ ಕಾರ್ಖಾನೆಗಳು, ಗಣಿಗಳು, ಪ್ಲಾಂಟೇಷನ್, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಮೊದಲಾದವುಗಳಲ್ಲಿ ದುಡಿಯುವ ಮಹಿಳೆಯರಿಗೆ ಅವರ ಋತುಚಕ್ರದ ಕಾಲಕ್ಕೆ ಬಳಸಿಕೊಳ್ಳಲು ವಾರ್ಷಿಕ 6 ಋತುಸ್ರಾವ ರಜೆಗಳನ್ನು ಶಿಫಾರಸ್ಸು ಮಾಡಿದ್ದು, ಈ ನಿಮಿತ್ತ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿರುತ್ತದೆ.
ದುಡಿಯುವ ಮಹಿಳಾ ಕಾರ್ಮಿಕರಿಗೆ ಅವರ ಋತುಚಕ್ರದ ಸಮಯದಲ್ಲಿ ವೇತನ ಸಹಿತ ಋತುಸ್ರಾವ ರಜೆ ಮಂಜೂರು ಮಾಡುವ ಕುರಿತು ವಿವಿಧ ಸಂಘಟನೆಗಳು, ಮಹಿಳಾ ಸಂಘಟನೆಗಳು, ಕಾರ್ಮಿಕ ಪ್ರತಿನಿಧಿಗಳು, ಆಡಳಿತ ವರ್ಗದವರು ಹಾಗೂ ಸಾರ್ವಜನಿಕರ ಅಭಿಪ್ರಾಯವನ್ನು ಪಡೆಯಲು ಈಗಾಗಲೇ ಕಾರ್ಮಿಕ ಇಲಾಖೆಯ https://karmikaspandana.karnataka.gov.in ಕಾರ್ಖಾನೆಗಳು, ಬಾಯ್ಲರುಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯ https://esuraksha.karnataka.gov.in ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ https://ksuwssb.karnataka.gov.in ವೆಬ್‍ಸೈಟ್‍ಗಳಲ್ಲಿ ಈ ಬಗ್ಗೆ ಪ್ರಕಟಣೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.