ನವದೆಹಲಿ : ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಸ್ವಾಮೀಜಿಗಳು ಯಾವುದೇ ಕಾರಣಕ್ಕೂ ವಿವಾದಾತ್ಮಕ ಹೇಳಿಕೆ ನೀಡಬಾರದು ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿಗಳು ರಾಜಕೀಯದಿಂದ ದೂರ ಇರಬೇಕು. ವಿವಾದಾತ್ಮಕ ಹೇಳಿಕೆ ನೀಡಬಾರದು. ಸಂವಿಧಾನ ಎಲ್ಲರಿಗೂ ಮತದಾನದ ಹಕ್ಕು ನೀಡಿದೆ. ಸ್ವಾಮೀಜಿಗಳಿಗೆ ನಾನು ಮನವಿ ಮಾಡುತ್ತೇನೆ. ವಿವಾದಾತ್ಮಕ ಹೇಳಿಕೆ ನೀಡಬೇಡಿ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಕಿಸಾನ್ ಸಂಘಟನೆ ನಡೆಸಿದ ಪ್ರತಿಭಟನೆಯಲ್ಲಿ ಚಂದ್ರಶೇಖರ ಸ್ವಾಮೀಜಿಯೂ ಪಾಲ್ಗೊಂಡಿದ್ದರು. ಈ ವೇಳೆ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದಾರೆ. ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ, ವಕ್ಫ್ ಬೋರ್ಡ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಪಾಕಿಸ್ತಾನ ರೀತಿಯಲ್ಲಿ ಭಾರತದಲ್ಲೂ ಕಾನೂನು ಜಾರಿಯಾಗಬೇಕು. ಭಾರತದಲ್ಲಿ ಮುಸ್ಲಿಮರಿಗೆ ಮತ ಚಲಾಯಿಸುವ ಹಕ್ಕನ್ನ ರದ್ದು ಮಾಡಬೇಕು ಎಂಬ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದಾರೆ.
ಹೌದು ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು. ಎಲ್ಲರೂ ಸೇರಿ ದೇಶದಲ್ಲಿ ವಕ್ಫ್ ಮಂಡಳಿಗೆ ಇಲ್ಲದಂತೆ ಮಾಡಬೇಕು. ರೈತರ ಪರವಾಗಿ ಜಮೀನು ಉಳಿಸಲು ಬೇಕಾದ ಹೋರಾಟವನ್ನು ಮಾಡೋಣ. ಸರ್ಕಾರ ಬಿದ್ದು ಹೋದರು ಪರವಾಗಿಲ್ಲ ನಾವೆಲ್ಲರೂ ಹೋರಾಡೋಣ. ಎಂದು ಬೆಂಗಳೂರಿನಲ್ಲಿ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆ ನೀಡಿದರು.