ಆಂಧ್ರಪ್ರದೇಶದಲಿ ಘೋರ ದುರಂತವೊಂದು ಸಂಭವಿಸಿದ್ದು, ಆಂಧ್ರಪ್ರದೇಶದ ಫಾರ್ಮಾ ಕಂಪನಿಯಲ್ಲಿ ವಿಷಕಾರಿ ಅನಿಲ ಸೋರಿಕೆಯಲ್ಲಿ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇತರರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಿಷಾನಿಲ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಒಂಬತ್ತು ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪಿ.ನಾಗೇಶ್ವರರಾವ್ ತಿಳಿಸಿದ್ದಾರೆ.
ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮಾತನಾಡಿ, ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಪರವಾಡದಲ್ಲಿರುವ ಟಾಗೋರ್ ಫಾರ್ಮಾದಲ್ಲಿ ಸೋರಿಕೆಯಾದ ವಿಷಕಾರಿ ಅನಿಲವನ್ನು ಸೇವಿಸಿ ಒಬ್ಬರು ಸಾವನ್ನಪ್ಪಿದ್ದಾರೆ. ಅನಿಲ ಸೋರಿಕೆ ಘಟನೆಯ ನಂತರ ಒಂಬತ್ತು ಮಂದಿಯನ್ನು ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಮತ್ತು ಚಿಕಿತ್ಸೆ ನೀಡಲಾಗಿದೆ.