ನವದೆಹಲಿ : ಒಡಿಶಾದ ಭುವನೇಶ್ವರದಿಂದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಬಿಹಾರ ಮೂಲದ ದಂಪತಿಗಳು ತಮ್ಮ ನಾಲ್ಕು ವರ್ಷದ ಮಗಳನ್ನು ಇಲ್ಲಿ 40,000 ರೂ.ಗೆ ಮಾರಾಟ ಮಾಡಿದ್ದಾರೆ. ಭುವನೇಶ್ವರದ ಸಿಸುಪಾಲ್‌ಗಢ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ದಂಪತಿ ದಿನಗೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು.
ಬಿಹಾರ ಮೂಲದ ದಂಪತಿಗಳು ತಮ್ಮ ನಾಲ್ಕು ವರ್ಷದ ಮಗಳನ್ನು ಪುರಿ ಜಿಲ್ಲೆಯ ಪಿಪಿಲಿ ಪ್ರದೇಶದ ದಂಪತಿಗೆ ಮಾರಾಟ ಮಾಡಿದ್ದಾರೆ. ಜಮೀನು ಮಾಲೀಕ ಸಾರ್ಥಕ್ ಮಹಾಂತಿ ಅವರು ಬಡಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದಾಗ ವಿಷಯ ಬೆಳಕಿಗೆ ಬಂದಿದೆ. ದೂರು ಸ್ವೀಕರಿಸಿದ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಬಾಲಕಿಯನ್ನು ರಕ್ಷಿಸಿ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಇವರಲ್ಲಿ ಬಾಲಕಿಯ ಪೋಷಕರು, ಹುಡುಗಿಯನ್ನು ಖರೀದಿಸಿದ ದಂಪತಿಗಳು ಮತ್ತು ಒಪ್ಪಂದವನ್ನು ನಡೆಸಿದ ಇಬ್ಬರು ಮಹಿಳೆಯರು ಸೇರಿದ್ದಾರೆ.
ಬಾಲಕಿಯನ್ನು 40,000 ರೂ.ಗೆ ಮಾರಾಟ ಮಾಡಿರುವುದನ್ನು ದಂಪತಿ ಒಪ್ಪಿಕೊಂಡಿದ್ದಾರೆ ಎಂದು ಬಡಗಡ ಪೊಲೀಸ್ ಠಾಣೆಯ ಐಐಸಿ ತೃಪ್ತಿ ರಂಜನ್ ನಾಯಕ್ ತಿಳಿಸಿದ್ದಾರೆ. ಬಾಲಕಿಯ ಪೋಷಕರು ದಿನಗೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಈ ಇಡೀ ಘಟನೆಯ ಚಿತ್ರಗಳು ಆ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಈ ವಿಷಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.