ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೊಟೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೇಲೆ ದುಷ್ಕರ್ಮಿಗಳು ಲಾಂಗು, ಮಚ್ಚುಗಳಿಂದ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಹೊಸಕೋಟೆಯಲ್ಲಿ ಕಳೆದ ವಾರ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಟ್ಯೂಷನ್ ಮುಗಿಸಿ ವಾಪಸ್ ಆಗುತ್ತಿದ್ದ ಸೈಯದ್ ಇಶಾನ್ ಮೇಲೆ 10 ಕ್ಕೂ ಹೆಚ್ಚು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಲಾಂಗು, ಮಚ್ಚು ವಿಕೆಟ್ ಗಳಿಂದ ಇಶಾನ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಹಲ್ಲೆಗೊಳಗಾದ ವಿದ್ಯಾರ್ಥಿ ಸೈಯದದ್ ಇಶಾನ್ ಕೈಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದಾನೆ. ಘಟನೆ ಸಂಬಂಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಹಲ್ಲೆ ನಡೆಸಿದ ಖಾದೀರ್, ಫಾರಜ್, ಮಸ್ತನ್, ನವಾಸ್ ಸೇರಿ 9 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ.