ಮಂಡ್ಯ : ಈ ಹಿಂದೆ ಅಬಕಾರಿ ಇಲಾಖೆಯ ಸಚಿವ ಸಚಿವ ಆರ್ ಬಿ ತಿಮ್ಮಾಪುರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು. ಇದೀಗ ಮಂಡ್ಯ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ಬಾರ್ ಮತ್ತು ರೆಸ್ಟೋರೆಂಟ್ ಗಾಗಿ ಅರ್ಜಿ ಸಲ್ಲಿಸಿದವರ ಬಳಿ ಅಬಕಾರಿ ಇಲಾಖೆ ಅಧಿಕಾರಿಗಳು ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಅರ್ಜಿದಾರರು ಲೋಕಾಯುಕ್ತಕ್ಕೆ ಇಬ್ಬರು ಅಧಿಕಾರಿಗಳ ವಿರುದ್ಧ ದೂರು ಸಲ್ಲಿಸಿದ್ದಾರೆ.
ಹೌದು ಮಂಡ್ಯದ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಸಿ ಎಲ್-7 ಲೆಸೆನ್ಸ್ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ. ಲಕ್ಷ್ಮಮ್ಮ ಎಂಬುವರ ಹೆಸರಿನಲ್ಲಿ ಬಾರ್ ಲೈಸೆನ್ಸ್ ಗೆ ಅರ್ಜಿ ಹಾಕಲಾಗಿತ್ತು. ಮಂಡ್ಯದ ಜಿಲ್ಲೆಯ ಮದ್ದೂರು ತಾಲೂಕಿನ ಚಂದುಪುರ ಗ್ರಾಮದಲ್ಲಿ ಬಾರ್ ಹಾಗೂ ರೆಸ್ಟೋರೆಂಟ್ ಗೆ ಅನುಮತಿ ಪಡೆಯಲು ಅರ್ಜಿ ಸಲ್ಲಿಸಲಾಗಿತ್ತು.
ಮೊದಲು ಆನ್ಲೈನ್ ನಲ್ಲಿ ಲಕ್ಷ್ಮಮ್ಮ ಅವರ ಮಗ ಪುನೀತ್ ಅರ್ಜಿ ಸಲ್ಲಿಸಿದ್ದರು. ಆಮೇಲೆ ಅರ್ಜಿಯನ್ನು ರಿಜೆಕ್ಟ್ ಆದ ಹಿನ್ನೆಲೆಯಲ್ಲಿ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸಿದ್ದಾರೆ. ಈ ವೇಳೆ ಅಬಕಾರಿ ಇಲಾಖೆಯಲ್ಲಿ ಲೈಸೆನ್ಸ್ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ಪ್ರಾರಂಭದಲ್ಲಿ 40 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದು, ಬಳಿಕ ಕೊನೆಗೆ 20 ಲಕ್ಷಕ್ಕೆ ಬೇಡಿಕೆ ಆರೋಪ ಕೇಳಿ ಬಂದಿದೆ.
ಮೊಬೈಲ್ ಸ್ವಿಚ್ ಆಫ್ ಮಾಡಿಸಿ ಅಬಕಾರಿ ಡಿಸಿ ಲಂಚ ಕೇಳಿದ ಆರೋಪ ಕೇಳಿ ಬಂದಿದೆ.ಈ ಸಂಬಂಧ ಮಂಡ್ಯ ಲೋಕಾಯುಕ್ತಕ್ಕೆ ಪುನೀತ್ ದೂರು ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ಅಬಕಾರಿ ಇನ್ಸ್ಪೆಕ್ಟರ್ ಶಿವಶಂಕರ್ ಹಾಗೂ ಅಬಕಾರಿ ಡಿಸಿ ರವಿಶಂಕರ್ ವಿರುದ್ಧ ಕೂಡ ಪುನೀತ್ ದೂರು ನೀಡಿದ್ದಾರೆ. ಲಂಚ ಕೇಳುವ ಆಡಿಯೋ ಸಮೇತ ಪುನೀತ್ ದೂರು ನೀಡಿದ್ದಾರೆ ಎನ್ನಲಾಗಿದೆ.