ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಈ ಒಂದು ಪ್ರಕಾರಣವನ್ನು ರದ್ದು ಮಾಡುವಂತೆ ಕೋರಿ ಯಡಿಯೂರಪ್ಪ ಅವರ ಅರ್ಜಿ ವಿಚಾರಣೆ ನಡೆದಿದ್ದು, ವಿಚಾರಣೆ ವೇಳೆ ಖುದ್ದು ಹಾಜರಾತಿಯನ್ನು ವಿಸ್ತರಿಸಿ, ವಿಚಾರಣೆಯನ್ನು ಡಿಸೆಂಬರ್ 2 ರಂದು ನಿಗದಿಪಡಿಸಿ ಕೋರ್ಟ್ ಆದೇಶ ಹೊರಡಿಸಿತು.
ಪೋಕ್ಸೋ ಪ್ರಕರಣಕ್ಕೆ ಸಂಬಂಧಸಿದಂತೆ ಮಧ್ಯಂತರ ಆದೇಶ ಇರುವುದರಿಂದ ವಿಚಾರಣೆ ಸ್ಥಗಿತವಾಗಿದೆ. ಪೋಕ್ಸೋ ಕೇಸ್ ಆಗಿರುವುದರಿಂದ ತುರ್ತು ವಿಚಾರಣೆ ಮಾಡಿ ಎಂದು ಮನವಿ ಮಾಡಿಕೊಳ್ಳಲಾಗಿತ್ತು. ಸರ್ಕಾರದ ಎಸ್ಪಿಪಿ ರವಿವರ್ಮ ಕುಮಾರ್ ಮನವಿ ಮಾಡಿಕೊಂಡಿದ್ದರು. ಈ ವೇಳೆ ಡಿಸೆಂಬರ್ 2ರ ಮಧ್ಯಾಹ್ನ 2:30 ಕ್ಕೆ ವಿಚಾರಣೆ ನಿಗದಿ ಪಡಿಸಿ ಹೈಕೋರ್ಟ್ ಅದೇಶಿಸಿದೆ. ಅಲ್ಲದೇ ಬಿಎಸ್ ಯಡಿಯೂರಪ್ಪ ಖುದ್ದು ಹಾಜರಾತಿಗೆ ವಿನಾಯಿತಿ ನೀಡಿದ್ದ ಆದೇಶ ಕೂಡ ವಿಸ್ತರಣೆಯಾಗಿದೆ.
ಪ್ರಕರಣದ ಹಿನ್ನೆಲೆ
ಈ ವರ್ಷದ ಮಾರ್ಚ್ 3 ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ದೂರಿನ ಆಧಾರದ ಮೇಲೆ ಎಫ್‌ಐಆರ್ ಕೂಡ ದಾಖಲಾಗಿದೆ.