ಚಿತ್ರದುರ್ಗ : ಚಿತ್ರದುರ್ಗದಲ್ಲಿ ಭೀಕರವಾದಂತಹ ಕೊಲೆಯಾಗಿದ್ದು, ಪ್ರೀತಿಸಿ ಮದುವೆಯಾಗಿದ್ದ ವ್ಯಕ್ತಿಯನ್ನು, ಯುವತಿಯ ಮನೆಯ ಸುಮಾರು 20 ಜನರು ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗದ ಕೋಣನೂರು ಗ್ರಾಮದಲ್ಲಿ ನಡೆದಿದೆ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಚಿತ್ರದುರ್ಗದ ಎಸ್ ಪಿ ರಂಜಿತ್ ಕುಮಾರ್ ಬಂಡಾರು ಮಾಹಿತಿ ನೀಡಿದರು.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಕರಣದ 6 ಆರೋಪಿಗಳ ಬಂಧನವಾಗಿದೆ. ಕಾವ್ಯ, ದಿವ್ಯ, ಶಂಕರಮ್ಮ, ಬಸವರಾಜ,ಪ್ರಸನ್ನ ಮತ್ತು ಹರ್ಷ ಎನ್ನುವ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಭರಮಸಾಗರ ಠಾಣೆಯ ಪೊಲೀಸರಿಂದ ಇದೀಗ 6 ಆರೋಪಿಗಳನ್ನು ಬಂಧಿಸಲಾಗಿದೆ. ಕೊಲೆಯಾದ ಮಂಜುನಾಥ ತಂದೆ ಚಂದ್ರಪ್ಪ ಅವರು ದೂರು ನೀಡಿದ್ದರು. ಜಗದೀಶ್ ಸೇರಿದಂತೆ 20 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಅಕ್ಟೋಬರ್ 7 ರಂದು ಯುವತಿಯನ್ನು ಕರೆದುಕೊಂಡು ಹೋಗಿ ಮಂಜುನಾಥ್ ವಿವಾಹವಾಗಿದ್ದಾನೆ. ಅಕ್ಟೋಬರ್ 7ರಂದು ಯುವತಿ ನಾಪತ್ತೆ ಆಗಿರುವ ಕುರಿತಂತೆ ಪೋಷಕರು ದೂರು ದಾಖಲಿಸಿದ್ದಾರೆ. ಚಿತ್ರದುರ್ಗದ ಭರಮಸಾಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಠಾಣೆಗೆ ಬಂದಾಗ ಸ್ವಯಚೆಯಿಂದ ಯುವತಿ ತನ್ನ ಮನೆಗೆ ತೆರಳಿದ್ದಾಳೆ.
ಆದರೆ ನಿನ್ನೆ ಮಂಜುನಾಥ್ ಗ್ರಾಮಕ್ಕೆ ಆಗಮಿಸಿದ್ದಾನೆ ಈ ವೇಳೆ ಕೆರಳಿದ ಯುವತಿಯ ಪೋಷಕರು, ಮಂಜುನಾಥ್ ಮನೆಗೆ ನುಗ್ಗಿ ರಾಡ್ ಮತ್ತು ಇತರೆ ಮಾರಕಾಸ್ತ್ರಗಳಿಂದ ಆತನ ಮೇಲೆ ಭೀಕರವಾಗಿ ಹಲ್ಲೆ ಮಾಡಿ ಕೊಂದಿದ್ದಾರೆ. ಈ ವೇಳೆ ತಡೆಯಲು ಬಂದ ಮಂಜುನಾಥ್ ಪೋಷಕರ ಮೇಲು ಯುವತಿಯ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ.
ಮಂಜುನಾಥ್ ಕೊಲೆಯ ಸಂದರ್ಭದಲ್ಲಿ ಆತನ ಪೋಷಕರ ಮೇಲೂ ಹಲ್ಲೆ ಮಾಡಿದ್ದರು. ಯುವತಿಯ ಕುಟುಂಬಸ್ಥರು ಹಾಗೂ ಸಂಬಂಧಿಕರು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು. ಮಂಜುನಾಥ ತಂದೆ ಚಂದ್ರಪ್ಪ ಹಾಗೂ ತಾಯಿ ಅನುಸೂಯಮ್ಮ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆಗೆ ಒಳಗಾದಂತ ದಂಪತಿಗೆ ಇದೀಗ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಚಿತ್ರದುರ್ಗದ ಎಸ್ ಪಿ ರಂಜಿತ್ ಕುಮಾರ್ ಬಂಡಾರು ಮಾಹಿತಿ ನೀಡಿದರು.
ಘಟನೆ ಹಿನ್ನೆಲೆ?
ಚಿತ್ರದುರ್ಗದ ಕೋಣನೂರು ಗ್ರಾಮದಲ್ಲಿ ಮಂಜುನಾಥ್ (42) ಎನ್ನುವ ವ್ಯಕ್ತಿಯೊಂದಿಗೆ ರಕ್ಷಿತಾ ಪ್ರೀತಿಸಿ ಮದುವೆಯಾಗಿದ್ದರು. ಇದು ರಕ್ಷಿತಾ ಮನೆಯವರಿಗೆ ಇಷ್ಟವಿರಲಿಲ್ಲ. ಹಾಗಾಗಿ ಮಂಜುನಾಥ್ ಮನೆಗೆ ನುಗ್ಗಿ ರಕ್ಷಿತಾ ಕುಟುಂಬಸ್ಥರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಯುವತಿ ರಕ್ಷಿತಾ ಮನೆಯವರು ಇವರಿಬ್ಬರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದರು. ಆದರೂ ಕೂಡ ಕಳೆದ ಮೂರು ತಿಂಗಳ ಹಿಂದೆ ಇವರಿಬ್ಬರು ದೇವಸ್ಥಾನದಲ್ಲಿ ಕುಟುಂಬಸ್ಥರ ವಿರೋಧದ ನಡುವೆಯೂ ಮದುವೆಯಾಗಿದ್ದರು.
ಮಂಜುನಾಥ್ ಮೇಲೆ ಕೋಪಗೊಂಡಿದ್ದ ರಕ್ಷಿತಾ ಕುಟುಂಬ ಬುಧವಾರ ಮಧ್ಯಾಹ್ನ ಏಕಾಏಕಿ ಹಲ್ಲೆ ನಡೆಸಿದೆ. ಸುಮಾರು 20 ಮಂದಿ ಮಂಜುನಾಥ್ ಗೆ ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಮಂಜುನಾಥ್ ತಂದೆ ಚಂದ್ರಪ್ಪ ಹಾಗೂ ತಾಯಿ ಅನಸೂಯಮ್ಮಗೂ ಗಂಭೀರ ಗಾಯವಾಗಿದೆ .ಇಬ್ಬರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬ್ರಹ್ಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.