ಬೆಂಗಳೂರು : ಆಪ್ ಮೂಲಕ ಸಾಲ ಪಡೆದಿದ್ದ ವ್ಯಕ್ತಿಗೆ ಸಾಲದ ಹಣ ವಾಪಸ್ ನೀಡದಿದ್ದರೆ, ನಗ್ನ ಚಿತ್ರ ವೈರಲ್ ಮಾಡುವುದಾಗಿ ಕರೆ ಮಾಡಿ ಕಿರುಕುಳ ನೀಡಲಾಗುತ್ತಿತ್ತು. ಕಿರುಕುಳದಿಂದ ಬೇಸತ್ತು ಖಾಸಗಿ ಚಾನೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಕ್ಯಾಮೆರಾ ಮ್ಯಾನ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕಿರಣ್ (32) ಎಂದು ತಿಳಿದುಬಂದಿದೆ. ಆಪ್ ಒಂದರ ಮೂಲಕ ಕಿರಣ್ ಸಾಲ ಪಡೆದಿದ್ದ. ಸಾಲದ ಹಣ ವಾಪಸ್ ನೀಡದಿದ್ದರೆ, ನಗ್ನ ಚಿತ್ರ ವೈರಲ್ ಮಾಡುವುದಾಗಿ ಕರೆ ಮಾಡಿ ಕಿರುಕುಳ ನೀಡಲಾಗುತ್ತಿತ್ತು. ಸಾಲದ ಹಣ ವಾಪಸ್ ನೀಡದಿದ್ದರೆ ನಗ್ನ ಚಿತ್ರ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.
ಕಿರಣ್ ಫೋಟೋ ಎಡಿಟ್ ಮಾಡಿ ನಗ್ನ ಚಿತ್ರ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಹಾಗಾಗಿ ಕಿರಣ್ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಿರಣ್ ಖಾಸಗಿ ಚಾನೆಲ್ ಒಂದರಲ್ಲಿ ಕ್ಯಾಮೆರಾಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ಅವರ ಮೃತ ದೇಹವನ್ನು ನೆಲಮಂಗಲದ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.