ಮೈಸೂರು : ಮೈಸೂರು ಜಿಲ್ಲೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಿರಿಯಾಜಿಯಲ್ಲಿ ನಡೆದಿದೆ. ಸುಶೀಲಾ (48) ಎಂಬ ಮಹಿಳೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಫಾರ್ಚುನ್ ಮೈಕ್ರೋ ಫೈನಾನ್ಸ್ ಎಂಬ ಸಂಸ್ಥೆಯಿಂದ ಸುಶೀಲ ಸಾಲ ಪಡೆದಿದ್ದರು. ಸಾಲ ಮರುಪಾವತಿಸುವಂತೆ ಸಂಸ್ಥೆ ಕಿರುಕುಳ ನೀಡಿದೆ ಎಂಬ ಆರೋಪ ಕೇಳಿಬಂದಿದೆ. ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.