ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ದೆಹಲಿ ಮೂಲದ ಯುವತಿಯೊಬ್ಬಳು ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಇದೀಗ ಮತ್ತೊಂದು ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಪದವಿ ಓದುತ್ತಿರುವ ಯುವತಿ ಒಬ್ಬಳು ಮಾನಸಿಕ ಖಿನ್ನತೆಗೆ ಒಳಗಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ರಾಜಾಜಿನಗರದ ರಾಮಮಂದಿರ ಬಳಿ ನಡೆದಿದೆ.
ಹೌದು ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಾಜಿನಗರದ ರಾಮಮಂದಿರ ಬಳಿ ನಡೆದಿದೆ. ಮನೆಯ ಟೆರೆಸ್ ನಲ್ಲಿ ಪ್ರಿಯಾಂಕ (19) ಎನ್ನುವ ಯುವತಿ ನೇಣಿಗೆ ಶರಣಾಗಿದ್ದಾಳೆ. ಎಂ ಇ ಎಸ್ ಕಾಲೇಜಿನಲ್ಲಿ ಪ್ರಿಯಾಂಕ ದ್ವಿತೀಯ ವರ್ಷದ ಬಿಕಾಂ ಓದುತ್ತಿದ್ದಳು. ಖಿನ್ನತೆಗೆ ಒಳಗಾಗಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ರಾಜಾಜಿನಗರದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.