ಬೆಂಗಳೂರು : ಡಿಸೆಂಬರ್ 5 ರಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದಾರೆ. ಈ ಒಂದು ಸ್ವಾಭಿಮಾನಿ ಸಮಾವೇಶಕ್ಕೆ ಕೆಲ ರಾಜ್ಯ ಕಾಂಗ್ರೆಸ್ ನಾಯಕರು ಇದೀಗ ಕಾಂಗ್ರೆಸ್ ಹೈಕಮಾಂಡ್ಗೆ ಪತ್ರ ಬರೆದಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಪತ್ರ ಬರೆದು ಪಕ್ಷದ ಚಿಹ್ನೆ ಬಳಸಿ ಪಕ್ಷದ ವೇದಿಕೆಯಲ್ಲಿಯೇ ಸಮಾವೇಶ ನಡೆಸಲು ಮನವಿ ಮಾಡಿದ್ದಾರೆ.
ಹೌದು AICC ನಾಯಕರಿಗೆ ರಾಜ್ಯ ಕಾಂಗ್ರೆಸ್ ನಾಯಕರು ಇದೀಗ ದೂರು ನೀಡಿದ್ದಾರೆ. ಪತ್ರದಲ್ಲಿ ಹೆಸರನ್ನು ಮರೆಮಾಚಿಸಿ ನಾಯಕರಿಗೆ ದೂರು ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಪರ ಸ್ವಾಭಿಮಾನಿ ಸಮಾವೇಶ ಮಾಡಲಾಗುತ್ತಿದೆ. ಪಕ್ಷದ ವೇದಿಕೆಯಿಂದ ಹೊರತಾದ ಕಾರ್ಯಕ್ರಮ ಎಂದು ಬಿಂಬಿಸಲಾಗುತ್ತಿದೆ. ಇಲ್ಲಿ ಆಯೋಜಕರೆಲ್ಲ ಪಕ್ಷದ ಸಚಿವರು, ಪಕ್ಷದ ಶಾಸಕರು, ಮುಖಂಡರೆ ಇದ್ದಾರೆ.
ಆದರೂ ಯಾಕೆ ಕಾಂಗ್ರೆಸ್ ಪಕ್ಷದ ಚಿನ್ಹೆಯ ಮೇಲೆ ಸಮಾವೇಶ ಮಾಡುತ್ತಿಲ್ಲ. ವೈಯಕ್ತಿಕ ಬಲಪ್ರದರ್ಶನಕ್ಕೆ ಪಕ್ಷದ ನಾಯಕರನ್ನು ಬಳಸಿಕೊಳ್ಳಲಾಗುತ್ತಿದ್ದು,ಅಧಿಕಾರ ಕೊಟ್ಟ ಪಕ್ಷ ದೂರ ಬಿಟ್ಟು ಸಮಾವೇಶ ಮಾಡುವ ಉದ್ದೇಶವೇನು? ಸ್ವಾಭಿಮಾನ ಸಮಾವೇಶವನ್ನು ಪಕ್ಷದ ವೇದಿಕೆಯಲ್ಲಿಯೇ ಮಾಡಲಿ ಪಕ್ಷದ ವೇದಿಕೆಯನ್ನು ಬಿಟ್ಟು ಸಮಾವೇಶ ಮಾಡುವ ಉದ್ದೇಶ ಒಳ್ಳೆಯದಲ್ಲ ಎಂದು ಉಲ್ಲೆಖಿಸಲಾಗಿದೆ.
ಕಾಂಗ್ರೆಸ್ ಚಿಹ್ನೆ ಬಳಸಿಕೊಂಡೆ ಹಾಸನ ಸಮಾವೇಶ ಆಯೋಜನೆ ಮಾಡಿ. ಸಿದ್ದರಾಮಯ್ಯ ಮತ್ತು ಉಳಿದ ಸಚಿವರಿಗೆ ತಿಳಿ ಹೇಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಎಐಸಿಸಿ ನಾಯಕರಿಗೆ ದೂರಿನ ಪತ್ರ ರವಾನಿಸಲಾಗಿದೆ. ಈ ವೇಳೆ ಸಚಿವರಾದ ಕೆ ಎನ್ ರಾಜಣ್ಣ, ಮಹಾದೇವಪ್ಪ,MLC ಯತೀಂದ್ರ ಕೂಡ ಸ್ಥಳ ಪರಿಶೀಲನೆ ದಾಖಲೆಗಳನ್ನು ಲಗತ್ತಿಸಲಾಗಿದೆ.








