ನವದೆಹಲಿ : ಕಳೆದ ಕೆಲವು ದಿನಗಳ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಅವರು, ಎರಡು ವರ್ಷಗಳ ಬಳಿಕ ಹುದ್ದೆ ತ್ಯಾಗ ಮಾಡಬೇಕಾಗುತ್ತದೆ ಎಂದು ಸಂಪುಟ ಪುನಾರಚನೆ ಕುರಿತಂತೆ ಸುಳಿವು ನೀಡಿದ್ದರು. ಇದೀಗ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಂಪುಟ ಪುನಾರಚನೆ ಕುರಿತಂತೆ ಸದ್ಯಕ್ಕೆ ಯಾವುದೇ ಚರ್ಚೆ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿದರು.
ಇಂದು ನವದೆಹಲಿಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಸಚಿವ ಸಂಪುಟ ಪುನರಚನೆ ಬಗ್ಗೆ ಯಾವುದೇ ಚರ್ಚೆ ಇಲ್ಲ. ಸಂಪುಟ ಪುನಾರಚನೆ ಸಂದರ್ಭ ಬಂದಿಲ್ಲ. ಕಾಂಗ್ರೆಸ್ ಅಧಿವೇಶನದ ಬಗ್ಗೆ ಖರ್ಗೆ ಜೊತೆಗೆ ಚರ್ಚೆ ನಡೆಸಿದ್ದೇವೆ. ಬೆಳಗಾವಿಯಲ್ಲಿ ಅಧಿವೇಶನ ಮಾಡಬೇಕು ಎಂಬ ಮನವಿ ಮಾಡಿದ್ದೇವೆ. ಅಲ್ಲದೆ ಇವತ್ತು CWC ಸಭೆಯಲ್ಲಿ ಚರ್ಚೆ ಆಗಲಿದೆ. ಇನ್ನು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವ ವಿಚಾರವಾಗಿ ಮಾಧ್ಯಮದ ಮೂಲಕ ರಾಜಕೀಯ ನಡೆಯಲ್ಲ ಎಂದು ತಿಳಿಸಿದರು.
ಇನ್ನು ಡಿಸೆಂಬರ್ 5 ರಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಸ್ವಾಭಿಮಾನ ಸಮಾವೇಶ ಹಮ್ಮಿಕೊಂಡಿದ್ದಾರೆ.ಈ ಕುರಿತು ರಾಜ್ಯದ ಕೆಲ ಕಾಂಗ್ರೆಸ್ ನಾಯಕರು ಕಾಂಗ್ರೆಸ್ ಚಿಹ್ನೆಯನ್ನು ಬಳಸಿಕೊಂಡು ಸ್ವಾಭಿಮಾನ ಸಮಾವೇಶ ಮಾಡಲಿ. ಅದರ ಹೊರತಾಗಿ ವೈಯಕ್ತಿಕ ಬಲಪ್ರದರ್ಶನಕ್ಕೆ ಈ ಸಮಾವೇಶ ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷರಿಗೆ ಪತ್ರದ ಮೂಲಕ ದೂರು ನೀಡಿದ್ದಾರೆ. ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪತ್ರ ಬರೆದಿರುವ ವಿಚಾರ ನನಗೆ ಗೊತ್ತಿಲ್ಲ. ಆದರೆ ಹಾಸನ ಕಾರ್ಯಕ್ರಮದ ಬಗ್ಗೆ ಸಿಎಂ ಸಿದ್ದರಾಮಯ್ಯ ನನಗೆ ಹೇಳಿದ್ದಾರೆ ಎಂದು ತಿಳಿಸಿದರು.