ನವದೆಹಲಿ: ಅದಾನಿ ವಂಚನೆ ಪ್ರಕರಣ ಸಂಬಂಧ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿಪಕ್ಷಗಳ ನಾಯಕರಿಂದ ಗದ್ದಲ ಕೋಲಾಹಲವನ್ನೇ ಉಂಟು ಮಾಡಲಾಯಿತು. ಈ ಹಿನ್ನಲೆಯಲ್ಲಿ ರಾಜ್ಯಸಭೆ ಕಲಾಪವನ್ನುಸೋಮವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಿಕೆ ಮಾಡಲಾಯಿತು.
Winter session of Parliament | Lok Sabha adjourned to meet again on 2nd December, 2024 at 1100 hours
— ANI (@ANI) November 29, 2024
ಅದಾನಿ ವಿಷಯದ ಬಗ್ಗೆ ಚರ್ಚೆಗೆ ಪ್ರತಿಪಕ್ಷಗಳ ಬೇಡಿಕೆಯ ಮಧ್ಯೆ ಸದನದಲ್ಲಿ ಗದ್ದಲದ ಕಾರಣ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು. ಸೋಮವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಲಾಗಿದೆ.
ಅದಾನಿ ಸಮೂಹದ ವಿರುದ್ಧದ ಆರೋಪಗಳು ಮತ್ತು ಮಣಿಪುರ ಮತ್ತು ಸಂಭಾಲ್ನಲ್ಲಿ ನಡೆದ ಹಿಂಸಾಚಾರದ ಕುರಿತು ಚರ್ಚೆಗೆ ಮುಂದೂಡಿಕೆ ನೋಟಿಸ್ಗಳನ್ನು ತಿರಸ್ಕರಿಸಿದ್ದನ್ನು ವಿರೋಧ ಪಕ್ಷದ ಸಂಸದರು ಪ್ರತಿಭಟಿಸಿದ್ದರಿಂದ ರಾಜ್ಯಸಭೆಯ ಕಲಾಪಗಳನ್ನು ಮುಂದೂಡಲಾಯಿತು.ಸದನ ಸೋಮವಾರ ಮತ್ತೆ ಸಭೆ ಸೇರಲಿದೆ.