ಬೆಂಗಳೂರು : ₹2,500 ಕೋಟಿ ವೆಚ್ಚದಲ್ಲಿ ರಾಜ್ಯದ 500 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಪರಿವರ್ತಿಸಲು ನಿನ್ನೆ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಿ ಮಕ್ಕಳ ಪರಿಪೂರ್ಣ ಮನೋವಿಕಾಸಕ್ಕೆ ದಾರಿಮಾಡಿಕೊಡುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
Asian Development Bank ನ 2500 ಕೋಟಿ ಗಳ ಬಾಹ್ಯ ನಿಧಿ ಸಹಯೋಗದೊಂದಿಗೆ ಜುಲೈ 2025 ರಿಂದ ಜೂನ್ 2029 ರವರೆಗೆ ಅಸ್ತಿತ್ವದಲ್ಲಿರುವ 500 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಪರಿವರ್ತಿಸುವ ಉಪಕ್ರಮವನ್ನು ಜಾರಿಗೊಳಿಸಲು ಅನುಮೋದನೆ ನೀಡಲಾಗಿದೆ.
₹2,500 ಕೋಟಿ ವೆಚ್ಚದಲ್ಲಿ ರಾಜ್ಯದ 500 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಪರಿವರ್ತಿಸಲು ನಿನ್ನೆ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.
ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಿ ಮಕ್ಕಳ ಪರಿಪೂರ್ಣ ಮನೋವಿಕಾಸಕ್ಕೆ ದಾರಿಮಾಡಿಕೊಡುವುದು ನಮ್ಮ ಸರ್ಕಾರದ… pic.twitter.com/ExM7DLC0YS
— Siddaramaiah (@siddaramaiah) November 29, 2024
· ಕೇಂದ್ರ ಪ್ರವಾಸೋದ್ಯಮದ ‘ಸ್ವದೇಶ್ ದರ್ಶನ್ 2.0’ ಯೋಜನೆಯಡಿ ಮೈಸೂರಿನಲ್ಲಿ Ecological Experience Zone ನ್ನು 18.47 ಕೋಟಿ ಮೊತ್ತದಲ್ಲಿ ಹಾಗೂ ಹಂಪಿಯಲ್ಲಿ Travellers Nook ನ್ನು 25.63 ಕೋಟಿ ರೂ. ಮೊತ್ತದಲ್ಲಿ ಅಭಿವೃದ್ಧಿಪಡಿಸುವ ಸಂಬಂಧ ಟೆಂಡರ್ ಕರೆಯಲು ಕರ್ನಾಟಕ ಪ್ರವಾಸೋದ್ಯಮ ಮೂಲ ಸೌಕರ್ಯ ನಿಗಮದ ಮೂಲಕ ಕರೆಯಲು ಸಚಿವ ಸಂಪುಟ ಅನುಮೋದನೆ ನೀಡಿದೆ.
· ಮೈಸೂರು ಲಲಿತ್ ಮಹಲ್ ಪ್ಯಾಲೇಸ್ ಹೋಟೆಲ್ ಕಾರ್ಯಾಚರಣೆ , ನಿರ್ವಹಣೆಗೆ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಯಿಂದ ಟೆಂಡರ್ ಮೂಲಕ ಹೋಟೆಲ್ ಆಪರೇಟರ್ನ್ನು ಆಯ್ಕೆ ಮಾಡಲು ಅನುಮೋದನೆ ನೀಡಲಾಗಿದೆ. ಪಂಚತಾರಾ ಹೋಟೆಲ್ ಗಳ ಸಮರ್ಪಕ ನಿರ್ವಹಣೆಯ ಸಲುವಾಗಿ ಲಲಿತ್ ಮಹಲ್ ಪ್ಯಾಲೇಸ್ ಹೋಟೆಲ್ ಕಟ್ಟಡದ ಪುನರ್ ನಿರ್ಮಾಣ,ನವೀಕರಣ,ನಿವರ್ಹಣೆ ಗಾಗಿ ಖಾಸಗಿಯವರಿಂದ ಟೆಂಡರ್ ಕರೆಯಲಾಗುವುದು. ಖಾಸಗಿ ನಿರ್ವಹಣೆಯ ಮೂಲಕ ಉತ್ತಮ ಲಾಭ ಹಾಗೂ ಉತ್ತಮ ಸೇವೆ ನೀಡಲು ಸಾಧ್ಯವಾಗುತ್ತದೆ ಎಂದರು.