ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) 50:50 ಅನುಪಾತದಲ್ಲಿ ಹಗರಣ ನಡೆದಿದೆ.ಮೇಲ್ನೋಟಕ್ಕೆ ಹಗರಣ ನಡೆದಿದೆ ಎಂದು ಹೇಳುತ್ತಿದ್ದೂ, ಹಾಗಾಗಿ ತನಿಖೆಯಿಂದ ಎಲ್ಲವೂ ಹೊರಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾದಲ್ಲಿ 50:50 ಅನುಪಾತದಲ್ಲಿ ಹಗರಣ ಆಗಿದೆ. ಇದನ್ನು ನಾನು ಒಪ್ಪಿಕೊಳ್ಳುತ್ತೇನೆ. ಮೇಲ್ನೋಟಕ್ಕೆ ಹಗರಣದ ಆಗಿದೆ ಎಂದು ಎಲ್ಲರೂ ಮಾತನಾಡುತ್ತಿದ್ದಾರೆ. ತನಿಖೆಯಿಂದ ಎಲ್ಲವೂ ಹೊರಬರಲಿದೆ. ಇನ್ನೂ ನನ್ನ ತಂದೆ, ತಾಯಿ, ಮಾವನ ವಿರುದ್ಧ ಕಾನೂನುಬಾಹಿರವಾಗಿ ಬದಲಿ ಭೂಮಿ ಪಡೆದ ಆರೋಪದಲ್ಲಿ ಯಾವುದೇ ಸತ್ಯ ಇಲ್ಲ.
ಇದು ತನಿಖಾ ಸಂಸ್ಥೆಗೂ ಸಹ ಗೊತ್ತಿದೆ. ಇಡಿಯಿಂದ ಮುಡಾ ಕ್ಲೀನ್ ಮಾಡಲು ಸಾಧ್ಯವಿಲ್ಲ. ಅದಕ್ಕಾಗಿ ಮುಡಾವನ್ನು ಕ್ಲೀನ್ ಮಾಡಲು ಆಯೋಗ ರಚನೆ ಮಾಡಿದ್ದೇವೆ. ಮುಡಾವನ್ನು ಖಂಡಿತ ನಾವೇ ಕ್ಲೀನ್ ಮಾಡುತ್ತೇವೆ. ಸಿಎಂ ವರ್ಚಸ್ಸಿಗೆ ಧಕ್ಕೆ ತಂದು ಅಧಿಕಾರಕ್ಕೆ ಬರುವುದೇ ಬಿಜೆಪಿಯ ಮುಖ್ಯ ಗುರಿ. ಅದಕ್ಕಾಗಿ ಸುಳ್ಳು ಆರೋಪ ಮಾಡಿ ಸರ್ಕಾರ ಅಸ್ಥಿರಗೊಳಿಸುವ ಯತ್ನ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವವನ್ನು ಕೊಲ್ಲುವ ಪ್ರಯತ್ನ ಮಾಡುತ್ತಿದ್ದಾರೆ. ಸಿಎಂ ವರ್ಚಸ್ಸಿಗೆ ಧಕ್ಕೆ ತರಲು ಯತ್ನಿಸಿ, ಅವರ ಹೆಸರಿಗೆ ಮಸಿ ಬಳಿಯುವ ಯತ್ನದಲ್ಲಿದ್ದಾರೆ ಎಂದು ಕಿಡಿಕಾರಿದ್ದಾರೆ.
ಈಗಾಗಲೇ ಈ ಒಂದು ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಲೋಕಾಯುಕ್ತ ಕಚೇರಿಗೆ ತೆರಳಿ ವಿಚಾರಣೆಯನ್ನು ಕೂಡ ಎದುರಿಸಿದ್ದರು. ಅಲ್ಲದೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಅವರನ್ನು ಕೂಡ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಇದೀಗ ಯತಿಂದ್ರ ಸಿದ್ದರಾಮಯ್ಯ ಅವರು ಹಗರಣ ನಡಿದಿದೆ ಎಂದು ಹೇಳಿಕೆ ನೀಡಿದ್ದಾರೆ.