ಬಳ್ಳಾರಿ : ಇತ್ತೀಚಿಗೆ ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಕಳೆದ 15 ದಿನಗಳಲ್ಲಿ ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ರಾಜ್ಯ ಸರ್ಕಾರ ಸೂಚನೆ ನೀಡಿತ್ತು. ತನಿಖೆಯ ವೇಳೆ ಸ್ಪೋಟಕವಾದಂತ ಅಂಶ ಬಯಲಾಗಿದ್ದು, ಸಿಸೇರಿಯನ್ ವೇಳೆ ನೀಡಿದ್ದ ‘IV ಗ್ಲೂಕೋಸ್’ ನಿಂದ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
IV ಗ್ಲುಕೋಸ್ ಕಳಪೆ ಗುಣಮಟ್ಟದಿಂದ ಕೂಡಿದೆ. ಆದರೂ, ಕೂಡ ವೈದ್ಯರು ಸಿಸೇರಿಯನ್ ವೇಳೆ IV ಗ್ಲುಕೋಸ್ ನೀಡಿದ್ದರಿಂದ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ತನಿಖಾ ತಂಡ ಪತ್ತೆ ಹಚ್ಚಿದೆ. ಹೀಗಾಗಿ, ಇಂಟ್ರಾವೆನಸ್ ದ್ರಾವಣ (IV ಗ್ಲುಕೋಸ್) ಬಳಕೆ ಮಾಡದಂತೆ ಆರೋಗ್ಯ ಇಲಾಖೆ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ.
ಕಳೆದ ನವೆಂಬರ್ 9 ರಂದು ಬಳ್ಳಾರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಒಟ್ಟು ಏಳು ಜನರು ಬಾಣಂತಿಯರು ದಾಖಲಾಗಿದ್ದಾರೆ ಈ ಸಂದರ್ಭದಲ್ಲಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬಳಿಕ ಕಳೆದ 15 ದಿನಗಳಲ್ಲಿ ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದಾರೆ.ಬಾಣಂತಿಯರ ಸಾವಿಗೆ ಕಾರಣವೇನು ಎಂಬುವುದನ್ನು ತಿಳಿಯಲು ಸರ್ಕಾರ ತಜ್ಞರ ಸಮಿತಿ ರಚಿಸಿತ್ತು.