ಬೆಂಗಳೂರು : ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರ ವಿರುದ್ಧ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ, ಇದೀಗ ಉಪ್ಪಾರಪೇಟೆ ಪೊಲೀಸರು ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದಾರೆ.
ಹೌದು ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರು ಡಿಸೆಂಬರ್ 2 ರಂದು ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.ಇಂದು ಬೆಳಿಗ್ಗೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 299 ರ ಅಡಿ ಸ್ವಾಮೀಜಿ ವಿರುದ್ಧ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.
ಸ್ವಾಮೀಜಿ ಹೇಳಿದ್ದೇನು?
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಚಂದ್ರಶೇಖರ ಸ್ವಾಮೀಜಿ ಮುಸ್ಲಿಮರಿಗೆ ಮತದಾನದ ಹಕ್ಕು ನಿಷೇಧಿಸುವಂತೆ ಒತ್ತಾಯಿಸಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ಹೇಳಿಕೆ ಬಗ್ಗೆ ಸೈಯದ್ ಎಂಬುವವರು ದೂರು ನೀಡಿದ್ದು, ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.