ಬೆಂಗಳೂರು : ಸ್ನಾತಕೋತ್ತರ ಪದವಿ ಪಡೆದಿರುವ ಶಾಲಾ ಶಿಕ್ಷಣ ಇಲಾಖೆಯ ಪ್ರೌಢಶಾಲಾ ಸಹಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಮುಂಬಡ್ತಿ ನೀಡಲು ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಸಹಶಿಕ್ಷಕರ ಒಂದೇ ಜೀಷ್ಠತಾ ಪಟ್ಟಿಯನ್ನು ತಯಾರಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.
ಮೇಲ್ಕಂಡ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ ಸ್ನಾತಕೋತ್ತರ ಪದವಿ ಪಡೆದಿರುವ ಶಾಲಾ ಶಿಕ್ಷಣ ಇಲಾಖೆಯ ಪ್ರೌಢಶಾಲಾ ಸಹಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಮುಂಬಡ್ತಿ ನೀಡಲು ಇಲಾಖೆಯ ನಾಲ್ಕು, ವಿಭಾಗಗಳಲ್ಲಿ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಅರ್ಹ ಸಹಶಿಕ್ಷಕರ ಜೀಷ್ಠತಾ ಪಟ್ಟಿಯನ್ನು ಪರಿಶೀಲಿಸಿ ಸಾಮಾನ್ಯ ಜೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸಿ, ಅಂತಿಮ ರಾಜ್ಯ ಮಟ್ಟದ ಒಂದೇ ಜೇಷ್ಠತಾ ಪಟ್ಟಿಯನ್ನು ಕರ್ನಾಟಕ ಸರ್ಕಾರಿ ನೌಕರರ (ಜೇಷ್ಠತೆ) ನಿಯಮಗಳು 1957ರ ನಿಯಮ 7-A ರಡಿ ತಯಾರಿಸಲು ಉಲ್ಲೇಖಿತ ಸರ್ಕಾರದ ಪತ್ರದಲ್ಲಿ ಆದೇಶವಾಗಿರುತ್ತದೆ.
ಮೇಲ್ಕಂಡ ಆದೇಶದಂತೆ ಕ್ರಮವಹಿಸಿ ರಾಜ್ಯ ಮಟ್ಟದ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸಲು ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿ ಅಂತಿಮಗೊಳಿಸುವ ಸಂಬಂಧ ದಿನಾಂಕ: 02.12.2024 ರಂದು ಅಪರಾಹ್ನ 3.30 ಗಂಟೆಗೆ ವಿಡಿಯೋ ಸಂವಾದ ಸಭೆಯನ್ನು ಮಾನ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದು ಸದರಿ ಸಭೆಗೆ ಈ ಕೆಳಗೆ ಕಾಣಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ಸದರಿ ಸರ್ಕಾರಿ ಆದೇಶದಂತೆ ಪಟ್ಟಿ ತಯಾರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಲಹೆಗಳೊಂದಿಗೆ ಪೂರ್ವಭಾವಿಯಾಗಿ ತಯಾರಿಸಿಕೊಂಡು ಈ ಕೆಳಕಂಡ ಲಿಂಕ್ ಮುಖಾಂತರ ಸಭೆಗೆ ಹಾಜರಾಗಲು ಕೋರಿದೆ.