ಬೆಂಗಳೂರು : ಮಾರ್ಚ್ 2025 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಪುನರಾವರ್ತಿತ, ಫಲಿತಾಂಶ ಉತ್ತಮಪಡಿಸಿಕೊಳ್ಳುವ ಹಾಗೂ ಖಾಸಗಿ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಸಂದಾಯ ಮಾಡಲು ಡಿಸೆಂಬರ್ 2 ರಿಂದ 12 ರವರೆಎ ಕೊನೆಯ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯ ಮತ್ತು ಉಲ್ಲೇಖಗಳನ್ವಯ 2025 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಪುನರಾವರ್ತಿತ, ಫಲಿತಾಂಶ ಉತ್ತಮಪಡಿಸಿಕೊಳ್ಳುವ ಹಾಗೂ ಖಾಸಗಿ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಸಂದಾಯ ಮಾಡಲು ದಿನಾಂಕ: 26-11-2024 ರವರೆಗೆ ರೂ 500+700=1200 ದಂಡಶುಲ್ಕದೊಂದಿಗೆ ಅವಕಾಶ ನೀಡಲಾಗಿತ್ತು. ಆದರೆ ಪೋಷಕರು ಹಾಗೂ ವಿದ್ಯಾರ್ಥಿಗಳ ದೂರವಾಣಿ ಕರೆಗಳು ಹಾಗೂ ಮನವಿ ಮೇರೆಗೆ ಸದರಿ ಪರೀಕ್ಷೆಗೆ ಶುಲ್ಕ ಪಾವತಿಸುವ ದಿನಾಂಕವನ್ನು ವಿಶೇಷ ದಂಡ ಸಹಿತ ಈ ಕೆಳಕಂಡಂತೆ ವಿಸ್ತರಿಸಿ ಆದೇಶಿಸಲಾಗಿದೆ.
ಜಿಲ್ಲಾ ಉಪನಿರ್ದೇಶಕರು ಪ್ರಾಂಶುಪಾಲರಿಂದ ಸ್ವೀಕರಿಸಿದ ಅರ್ಜಿಗಳನ್ನು ಮಂಡಲಿಯ ಜಾಲತಾಣದ PU Exam Portal Login ನಲ್ಲಿ Update ಮಾಡಿರುವುದನ್ನು ಖಾತ್ರಿಪಡಿಸಿಕೊಂಡು, ಪ್ರಾಂಶುಪಾಲರಿಂದ Update ಮಾಡಿರುವುದಕ್ಕೆ ಸಂಬಂಧಿಸಿದಂತೆ ಮುಚ್ಚಳಿಕೆ ಪತ್ರ ಪಡೆದ ನಂತರ ಕಾಲೇಜುವಾರು ಕ್ರೋಢೀಕೃತ ವಿದ್ಯಾರ್ಥಿಗಳ ಪಟ್ಟಿ, ಶುಲ್ಕ ಪಾವತಿಸಿರುವ ಮೂಲ ಚಲ್ಡನ್ ಹಾಗೂ ಚೆಕ್‌ಲಿಸ್ಟ್‌ನ್ನು ಆಯಾ ಜಿಲ್ಲಾ ಉಪನಿರ್ದೇಶಕರ ಕಛೇರಿಗಳಲ್ಲಿಯೇ ಕಾಯ್ದಿರಿಸುವುದು. ಅವಶ್ಯವಿದ್ದಲ್ಲಿ ಮಾತ್ರ ಮಂಡಲಿಯ ಪರಿಶೀಲನೆಗೆ ಒದಗಿಸುವುದು.