ಕಲಬುರ್ಗಿ : ಕಲಬುರ್ಗಿ ಜೈಲು ಅಧೀಕ್ಷಕಿ ಅನಿತಾ ಅವರ ಕಾರು ಸ್ಪೋಟಿಸುವುದಾಗಿ ಇತ್ತೀಚಿಗೆ ಹಲವರು ಕರೆ ಮಾಡಿ ಬೆದರಿಕೆ ಹಾಕಿದ್ದರು ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಒಂಬತ್ತು ಜನರ ವಿರುದ್ಧ FIR ದಾಖಲಾಗಿದೆ.
ಮುಸ್ತಫಾ,ನಸೀರ್, ಬಚ್ಚನ್,ಅಲ್ತಾಫ್, ದೇವರಾಜ್, ನಾಗರಾಜ್, ಶ್ರೀಕಾಂತ್ ಸೇರಿ 9 ಕೈದಿಗಳ ವಿರುದ್ಧ ಅಧೀಕ್ಷಕಿ ಅನಿತಾ ಎಫ್‌ಐಆರ್ ದಾಖಲಿಸಿದ್ದಾರೆ. ಜೈಲಿನಲ್ಲಿ ಮಾದಕ ವಸ್ತುಗಳಾದಂತಹ ಸಿಗರೇಟ್ ಬಿಡಿ ಗುಟ್ಕಾ ವಸ್ತುಗಳನ್ನು ಬಂದು ಮಾಡಿದ್ದಕ್ಕಾಗಿ ಕೈದಿಗಳು ಪ್ರತಿಭಟನೆ ಮಾಡಿದ್ದರು. ಬಳಿಕ ದುಷ್ಕರ್ಮಿ ಒಬ್ಬ ಆಡಿಯೋ ಮೂಲಕ ಜೈಲು ಅಧ್ಯಕ್ಷಕಿ ಅನಿತಾ ಅವರ ಕಾರು ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದ.
ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸರು, ಅಲರ್ಟ್ ಆಗಿ, ಇದನ್ನ ಜೈಲಿನಲ್ಲಿರುವ ಕೈದಿಗಳೇ ಕಳುಹಿಸಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿತ್ತು. ಇದೀಗ ಈ ಪ್ರಕರಣದ ಹಿಂದೆ 9 ಜನ ಕೈದಿಗಳ ಕೈವಾಡ ಇರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೆ ಕಲಬುರಗಿ ಜೈಲಿಗೆ ಅನಿತಾ ಅವರು ವರ್ಗಾವಣೆಯಾಗಿ ಬಂದಿದ್ದರು. ಜೈಲಿನಲ್ಲಿ ಚಾರ್ಜ್ ತೆಗೆದುಕೊಂಡ ದಿನವೆ ಕೈದಿಗಳ ಹೈಫೈ ಲೈಫ್ ಅನಾವರಣ ಆಗಿತ್ತು. ಇದನ್ನು ಗಂಭೀರವಾಗಿ ಅವರು ಪರಿಗಣಿಸಿದ್ದರು. ಇದಾದ ಬಳಿಕ ಕಾರಾಗೃಹ ಇಲಾಖೆ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿತ್ತು. ಜೈಲಿನಲ್ಲಿ ಬೀಡಿ, ಗುಟ್ಕಾ ಸಿಗರೇಟ್ ಬಂದ್ ಮಾಡಿದ್ದರು. ಇದರಿಂದ ಕೆರಳಿದ ಕೈದಿಗಳು ಅನೀತಾ ವಿರುದ್ಧ ಪ್ರತಿಭಟನೆ ಮಾಡಿದ್ದರು.
ಬಳಿಕ ಅನಿತಾ ಅವರ ಕಾರನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಯೊಬ್ಬ ಆಡಿಯೋ ಸಂದೇಶ ಕಳುಹಿಸಿದ್ದ ಪ್ರಕರಣ ಇದೇ ನವೆಂಬರ್ 28ರಂದು ಬೆಳಕಿಗೆ ಬಂದಿತ್ತು. ಅನಾಮದೇಯ ವ್ಯಕ್ತಿಯಿಂದ ಕಲಬುರಗಿ ನಗರದ ಪೊಲೀಸ್ ಇನ್ಸೆಪೆಕ್ಟರ್ ಮೊಬೈಲ್‍ಗೆ ಬೆದರಿಕೆ ಸಂದೇಶ ಬಂದಿತ್ತು. ಈ ಮಾಹಿತಿಯನ್ನು ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಇದರಿಂದ ಅಲರ್ಟ್ ಆದ ಅಧಿಕಾರಿಗಳು ಕಾರನ್ನು ಸಿಸಿಟಿವಿ ಇರುವೆಡೆ ಮಾತ್ರ ಪಾರ್ಕ್ ಮಾಡುವಂತೆ ಕಾರು ಚಾಲಕನಿಗೆ ಸೂಚಿಸಿದ್ದರು.








