ಬೆಂಗಳೂರು : ಇತ್ತೀಚೆಗೆ ಬೆಂಗಳೂರಿನಲ್ಲಿ ಚಿರತೆಯ ಹಾವಳಿ ಹೆಚ್ಚಾಗಿದ್ದು, ಕಳೆದ ಕೆಲವು ದಿನಗಳ ಹಿಂದೆ ಅರಣ್ಯ ಇಲಾಖೆ ಅಧಿಕಾರಿಗಳು 3 ಚಿರತೆಗಳನ್ನು ಸೆರೆ ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ. ಇದೀಗ ಸೋಲದೇವನಹಳ್ಳಿ ಗ್ರಾಮದಲ್ಲಿ ನರಭಕ್ಷಕ ಚಿರತೆ ಒಂದು ಮನೆಗೆ ನುಗ್ಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ಸೋಲದೇವನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ.
ಗ್ರಾಮದ ರಾಜಣ್ಣ ಎಂಬುವವರ ನಾಯಿಯ ಮೇಲೆ ದಾಳಿ ಮಾಡಿದ್ದು ಅದೃಷ್ಟವಶಾತ್ ನಾಯಿ ಚಿರತೆಯ ಬಾಯಿಯಿಂದ ಬಚಾವ್ ಆಗಿದೆ. ನಟ ವಿನೋದ್ ರಾಜ್ ತೋಟ ಸಮೀಪದ ಮನೆಯ ಬಳಿ ಈ ಒಂದು ಘಟನೆ ನಡೆದಿದೆ ಚಿರತೆಯ ಉಪಟಳ ಮಿತಿಮೀರಿದ ಹಿನ್ನೆಲೆಯಲ್ಲಿ ಇದೀಗ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಅಧಿಕಾರಿಗಳಿಗೆ ಸೋಲದೇವನಹಳ್ಳಿಯ ಗ್ರಾಮಸ್ಥರು ಮನವಿ ಮಾಡಿದ್ದಾರೆ.