ತೆಲಂಗಾಣ: ಇಲ್ಲಿನ ಮುಲುಗು ಜಿಲ್ಲೆಯಲ್ಲಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಏಳು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
Seven Maoists killed in exchange of fire with police in Mulugu district of Telangana: Police
— Press Trust of India (@PTI_News) December 1, 2024
ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಏಳು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಎಟುರ್ನಗರಂ ಅರಣ್ಯ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದೆ ಎಂದು ಮುಲುಗು ಎಸ್ಪಿ ಶಬರೀಶ್ ತಿಳಿಸಿದ್ದಾರೆ.
“ಎಟುರ್ನಗರಂ ಅರಣ್ಯ ಪ್ರದೇಶದಲ್ಲಿ ನಡೆದ ಪೊಲೀಸ್ ಎನ್ಕೌಂಟರ್ನಲ್ಲಿ ಏಳು ಮಾವೋವಾದಿಗಳು ಸಾವನ್ನಪ್ಪಿದ್ದಾರೆ” ಎಂದು ಎಸ್ಪಿ ಶಬರೀಶ್ ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.