ಬೆಂಗಳೂರು: ಡಿಸೆಂಬರ್.5ರಂದು ಹಾಸನದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ವಾಭಿಮಾನಿ ಸಮಾವೇಶವನ್ನು ಮಾಡಲಾಗುತ್ತಿದೆ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದರು.
ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು ರಾಜ್ಯದಲ್ಲಿ ಪ್ರತಿ ವಿಭಾಗವಾರು ಸಮಾವೇಶ ಮಾಡಲು ತೀರ್ಮಾನಿಸಲಾಗಿದೆ. ಎಲ್ಲೆಲ್ಲಿ ಕಳೆದುಕೊಂಡಿದ್ದೇವೋ ಅಲ್ಲಲ್ಲೇ ಹುಡುಕುವ ಕೆಲಸ ಮಾಡಲಿದ್ದೇವೆ. ಸದ್ಯದಲ್ಲೇ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಕೂಡ ಬರಲಿದೆ ಎಂದರು.
ಶಿಗ್ಗಾಂವಿ, ಸಂಡೂರು ಕ್ಷೇತ್ರದಲ್ಲಿ ಜನತೆಗೆ ಕೃತಜ್ಞತೆ ಸಲ್ಲಿಸಲು ಸಮಾವೇಶ ಮಾಡುತ್ತೇವೆ. ದೇಶದಲ್ಲಿ ಆಗುತ್ತಿರುವ ವಿಷಯಗಳ ಮೇಲೆ ಸಮಾವೇಶ ಮಾಡುತ್ತೇವೆ. ಸಮಾವೇಶಕ್ಕೆ ಪಕ್ಷದ ಎಲ್ಲಾ ನಾಯಕರಿಗೆ ಆಹ್ವಾನಿಸಲಾಗಿದೆ ಎಂದು ತಿಳಿಸಿದರು.
ಯಾವುದೇ ಗೊಂದಲವಿಲ್ಲದೇ ಪಕ್ಷದ ಅಡಿಯಲ್ಲೇ ಸ್ವಾಭಿಮಾನಿ ಸಮಾವೇಶ ಮಾಡುತ್ತಿದ್ದೇವೆ. ಕೆಲವರು ವೈಯಕ್ತಿಕವಾಗಿ ಮಾತನಾಡಬಹುದು. ಎಐಸಿಸಿ ನಾಯಕರ ಜೊತೆಗೆ ಮಾತನಾಡಿದ್ದೇವೆ. ಜನರ ಹಿತಕ್ಕಾಗಿ ಈ ಕಾರ್ಯಕ್ರಮ ಮಾಡಲಾಗುತ್ತಿದೆ. ಸರ್ಕಾರದ ಬಗ್ಗೆ ಸುಳ್ಳು ಆರೋಪ ಮಾಡಿದ್ದಕ್ಕೆ ಜನ ಉತ್ತರ ಕೊಡ್ತಿದ್ದಾರೆ. ನನ್ನ ನೇತೃತ್ವದಲ್ಲೇ ಹಾಸನದಲ್ಲಿ ಡಿಸೆಂಬರ್.5ರಂದು ಸ್ವಾಭಿಮಾನಿ ಸಮಾವೇಶ ಮಾಡಲಾಗುತ್ತಿದೆ ಎಂದರು.
ಡಿಸೆಂಬರ್.5ರಂದು ಹಾಸನದ ಸ್ವಾಭಿಮಾನಿ ಸಮಾವೇಶದ ಬಳಿಕ ಎಲ್ಲಾ ಜಿಲ್ಲೆಗಳಲ್ಲಿ ಇದೇ ರೀತಿಯ ಕಾರ್ಯಕ್ರಮ ಮಾಡಲಿದ್ದೇವೆ. ಇದಕ್ಕೆ ಎಐಸಿಸಿ ನಾಯಕರು ಸೂಚನೆ ಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಯಾವುದೇ ಪಾರ್ಟಿ ಇಲ್ಲ. ಎಲ್ಲರು ಜೊತೆಗೂಡಿ ಸಮಾವೇಶ ಮಾಡುತ್ತಿರುವುದಾಗಿ ತಿಳಿಸಿದರು.