ಬೆಂಗಳೂರು : ಹಳೆಯ ನಂಬರ್ ಪ್ಲೇಟ್ಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅಳವಡಿಸಲು ಕರ್ನಾಟಕ ಸರ್ಕಾರ ಮತ್ತೆ ಗಡುವು ವಿಸ್ತರಣೆ ಮಾಡಿದೆ. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ಸರ್ಕಾರ ನಾಲ್ಕು ಬಾರಿ ಬಾರಿ ಗಡುವು ವಿಸ್ತರಣೆ ಮಾಡಿತ್ತು. ಇದೀಗ ಮತ್ತೆ ಡಿಸೆಂಬರ್ 31ರ ವರೆಗೆ HSRP ನಂಬರ್ ಪ್ಲೇಟ್ ಅಳವಡಿಸಲು ಗಡುವು ವಿಸ್ತರಿಸಿದೆ.
ಹೌದು ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಡಿಸೆಂಬರ್ 31ರವರೆಗೆ ಗಡುವು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಸಿದೆ. HSRP ನಂಬರ್ ಪ್ಲೇಟ್ ಅಳವಡಿಸಲು ನವೆಂಬರ್ 30ರಂದು ಕೊನೆಯ ದಿನವಾಗಿತ್ತು. ಇದೀಗ ಸಾರಿಗೆ ಇಲಾಖೆಯಿಂದ ವರ್ಷಾಂತ್ಯದ ವರೆಗೆ ಗಡಗು ವಿಸ್ತರಿಸಲಾಗಿದೆ. ರಾಜ್ಯದಲ್ಲಿ ಸುಮಾರು 2 ಕೋಟಿ ಅಷ್ಟು ಹಳೆಯ ವಾಹನಗಳು ಇವೆ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕಾಗಿತ್ತು. ಆದರೆ 55 ಲಕ್ಷ ವಾಹನಗಳು ಮಾತ್ರ HSRP ನಂಬರ್ ಪ್ಲೇಟ್ ಅಳವಡಿಸಿವೆ.
ದ್ವಿಚಕ್ರ ವಾಹನಗಳು, ಆಟೋ ಮತ್ತು ನಾಲ್ಕು ಚಕ್ರಗಳ ವಾಹನಗಳು ಸೇರಿದಂತೆ ರಾಜ್ಯದ ಎಲ್ಲಾ ವಾಹನಗಳಿಗೂ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸುವುದನ್ನು ಕಡ್ಡಾಗೊಳಿಸಲಾಗಿದೆ. ವಂಚನೆ ಮತ್ತು ಕಳ್ಳತನದಿಂದ ರಕ್ಷಿಸಲು ಹೆಚ್ಚುವರಿ ಭದ್ರತಾ ಕ್ರಮಗಳನ್ನು ಒಳಗೊಂಡಿರುವ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅನ್ನು ಕಡ್ಡಾಯಾವಾಗಿ ಅಳವಡಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ.
ಕರ್ನಾಟಕದಲ್ಲಿರುವ ಸುಮಾರು 2 ಕೋಟಿಯಷ್ಟು ಹಳೆಯ ವಾಹನಗಳು, ಕೇವಲ 55 ಲಕ್ಷ ವಾಹನಗಳು ಮಾತ್ರ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿವೆ.2019ರ ಏಪ್ರಿಲ್ 1ಕ್ಕೂ ಹಿಂದಿನ ವಾಹನೆಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಇದೀಗ ಐದನೇ ಬಾರಿಗೆ ವಿಸ್ತರಿಸಲಾಗಿದೆ.ಡಿಸೆಂಬರ್ 31ರೊಳಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಾರಿಗೆ ಇಲಾಖೆ ಸೂಚಿಸಿದೆ.