ಕೋಲಾರ : ಜಿಲ್ಲೆಯಲ್ಲಿ ಇಂದು ಫೆಂಗಲ್ ಚಂಡಮಾರುತದ ಕಾರಣ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಇಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಡಿಸಿ ಆದೇಶಿಸಿದ್ದಾರೆ.
ಈ ಬಗ್ಗೆ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರು ಆದೇಶಿಸಿದ್ದು ಇಂದು ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಕೋಲಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ನೀಡಿರುವುದಾಗಿ ತಿಳಿಸಿದ್ದಾರೆ.
ಹಾಗಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ನಾಳಿನ ರಜೆಯನ್ನು ಮತ್ತೊಂದು ರಜಾ ದಿನಗಳಲ್ಲಿ ತರಗತಿ ನಡೆಸಿ ಸರಿದೂಗಿಸುವಂತೆ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಆದೇಶದಲ್ಲಿ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲೂ ರಜೆ ಘೋಷಣೆ
ಅದೇ ರೀತಿಯಾಗಿ ಫೆಂಗನ್ ಚಂಡಮಾರುತದ ಕಾರಣದಿಂದ ತುಂತುರು ಮಳೆಯ ಜೊತೆಗೆ ಚಳಿಗಾಳಿ ಬೀಸುವ ಕಾರಣದಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆಯನ್ನು ಘೋಷಿಸಲಾಗಿದೆ.
ಈ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಅವರು ಆದೇಶ ಹೊರಡಿಸಿದ್ದು, ಅದರಲ್ಲಿ ಇಂದು ಫೆಂಗಲ್ ಚಂಡಮಾರುತದ ಕಾರಣ ತುಂತುರು ಮಳೆಯ ಜೊತೆಗೆ ಚಳಿಗಾಳಿ ಬೀಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಈ ಹಿನ್ನಲೆಯಲ್ಲಿ ಇಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ನೀಡಿರುವುದಾಗಿ ತಿಳಿಸಿದ್ದಾರೆ.
ಶಾಲಾ-ಕಾಲೇಜು ವಿದ್ಯಾರ್ಥಿಗಳ ಆರೋಗ್ಯದ ಹಿನ್ನಲೆಯಲ್ಲಿ ಈ ಮುಂಚಾಗ್ರತಾ ಕ್ರಮವನ್ನು ಕೈಗೊಳ್ಳಲಾಗಿದೆ. ಇಂದಿನ ರಜೆಯ ದಿನದ ತರಗತಿಗಳನ್ನು ಮುಂದಿನ ಅವಧಿಯಲ್ಲಿ ಸರಿದೂಗಿಸುವಂತೆ ಸೂಚಿಸಿದ್ದಾರೆ.