ಬೆಂಗಳೂರು: ಮೈಸೂರಿನ ಮುಡಾ ಸೈಟು ಅಕ್ರಮ ಆರೋಪದಲ್ಲಿ ಈಗಾಗಲೇ ಹಲವರನ್ನು ಇಡಿ ವಿಚಾರಣೆ ನಡೆಸಿತ್ತು. ಈಗ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿದೆ.
ಈ ಸಂಬಂಧ ಜಾರಿ ನಿರ್ದೇಶನಾಲಯದ ಇಲಾಖೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಅಕ್ರಮ ಆರೋಪ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯವರಿಗೆ ನೋಟಿಸ್ ಜಾರಿಗೊಳಿಸಲಾಗಿದೆ.
ಇಡಿ ಜಾರಿಗೊಳಿಸಿರುವಂತ ನೋಟಿಸ್ ನಲ್ಲಿ ನಾಳೆ ಮುಡಾ ಅಕ್ರಮ ಆರೋಪ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಈ ಮೂಲಕ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ಬಿಗ್ ಶಾಕ್ ನೀಡಲಾಗಿದೆ.
ಇನ್ನೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೂ ಇಡಿ ಮುಡಾ ಹಗರಣ ಸಂಬಂಧ ನೋಟಿಸ್ ನೀಡಲಾಗಿದೆ ಎನ್ನಲಾಗಿತ್ತು. ಆದರೇ ಇಡಿಯಿಂದ ಇದುವರೆಗೆ ನನಗೆ ಯಾವುದೇ ನೋಟಿಸ್ ಬಂದಿಲ್ಲ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೊಟ್ಟಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.
BREAKING : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ‘ಹನಿಟ್ರ್ಯಾಪ್’ ಆರೋಪ : ಮತ್ತೆ ಬಂಧನದ ಭೀತಿ!