ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಹಾಲು ಮಹಾಮಂಡಳ(ಕೆಎಂಎಫ್) ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಕೆಎಎಸ್ ಅಧಿಕಾರಿ ಬಿ.ಶಿವಸ್ವಾಮಿ ಅವರನ್ನು ನೇಮಕ ಮಾಡಿ ಆದೇಶಿಸಿದೆ.
ಈ ಸಂಬಂಧ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿಯಾಗಿದ್ದಂತ ಸೂಪರ್ ಟೈಂ ಸ್ಕೇಲ್ ಕೆಎಎಸ್ ಅಧಿಕಾರಿ ಬಿ.ಶಿವಸ್ವಾಮಿಯವರನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಕೆಎಎಫ್ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ಕರ್ನಾಟಕ ಹಾಲು ಮಹಾಮಂಡಳ (KMF) ವ್ಯವಸ್ಥಾಪಕ ನಿರ್ದೇಶಕರಾಗಿದ್ದಂತ ಎಂ.ಕೆ ಜಗದೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಇವರಿಗೆ ಮುಂದಿನ ಸ್ಥಳ ನಿಯುಕ್ತಿಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಕಾರ್ಯವರದಿ ಮಾಡಿಕೊಳ್ಳುವಂತೆ ನಿರ್ದೇಶನವನ್ನು ಮಾಡಿದ್ದಾರೆ.
ಸ್ವಾಮೀಜಿಗಳು ಕ್ಷಮೆ ಕೇಳಿದರೂ ಕೇಸು ದಾಖಲಿಸಿದ್ದಾರೆ: ರಾಜ್ಯ ಸರ್ಕಾರದ ವಿರುದ್ಧ ಡಾ.ಸಿಎನ್ ಅಶ್ವತ್ಥನಾರಾಯಣ್ ಕಿಡಿ
BIG NEWS: ಕರ್ನಾಟಕ SSLC, ದ್ವಿತೀಯ PUC ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಹೀಗಿದೆ ವಿಷಯವಾರು ಪರೀಕ್ಷೆ