ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಬಂಗಾಳಕೊಲ್ಲಿಯಲ್ಲಿ ಎದ್ದಿರುವಂತ ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಭಾರೀ ಮಳೆ, ಸುಳಿಗಾಳಿ ಬೀಸತೊಡಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ನಾಳೆ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ ಎಂದಿದ್ದಾರೆ.
ಭಾರೀ ಮಳೆ ಹಾಗೂ ಚಳಿಗಾಳಿಯ ಕಾರಣದಿಂದಾಗಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿಯಿಂದ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಕಾಲೇಜು, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ನೀಡಲಾಗುತ್ತಿದೆ. ಈ ದಿನದ ತರಗತಿಯನ್ನು ಮುಂದಿನ ದಿನಗಳಲ್ಲಿ ಸರಿದೂಗಿಸುವಂತೆ ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ.
BIG NEWS: ಕರ್ನಾಟಕ SSLC, ದ್ವಿತೀಯ PUC ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಹೀಗಿದೆ ವಿಷಯವಾರು ಪರೀಕ್ಷೆ
ಕೆಪಿಸಿಸಿಯಲ್ಲಿ ಯಾವುದೇ ಹುದ್ದೆ ಖಾಲಿ ಇಲ್ಲ, ಅಧ್ಯಕ್ಷ ಸ್ಥಾನಕ್ಕೆ ಆಸೆ, ದುರಾಸೆ ಇಲ್ಲ: ಡಿ.ಕೆ. ಸುರೇಶ್
BREAKING ; ಡಿಸೆಂಬರ್ 13, 14 ರಂದು ಲೋಕಸಭೆಯಲ್ಲಿ ‘ಸಂವಿಧಾನ’ ಮೇಲಿನ ಚರ್ಚೆ, ಸರ್ವಪಕ್ಷಗಳು ಭಾಗಿ