Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಸಚಿವಾಲಯದ ಯೂಟರ್ನ್ ಬಳಿಕ ಬಾಂಗ್ಲಾದೇಶದಲ್ಲಿ ‘ಜಿಯೋಸ್ಟಾರ್ ಐಪಿಎಲ್ ಒಪ್ಪಂದ’ ರದ್ದು!

30/03/2026 2:53 PM

‘ಡಿ-ಮಾರ್ಟ್’ ದೈತ್ಯರನ್ನ ಸೋಲಿಸಿದ್ದು ಹೇಗೆ.? ಎಷ್ಟೇ ಬುದ್ಧಿವಂತರಿದ್ರು ಈ ತಂತ್ರಕ್ಕೆ ಬೀಳಲೇಬೇಕು, ಮಾಯಜಾಲದ ಹಿಂದಿನ ಸತ್ಯವಿದು!

30/03/2026 2:47 PM

ಏ.1ರಿಂದ ದೇಶಾದ್ಯಂತ ‘ಡಿಜಿಟಲ್ ಜನಗಣತಿ’ ಆರಂಭ! ನಿಮ್ಮ ‘ಮೊಬೈಲ್‌’ನಲ್ಲೇ ಹೀಗೆ ಮಾಹಿತಿಯನ್ನು ದಾಖಲಿಸಿ!

30/03/2026 2:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶೀಘ್ರದಲ್ಲೇ ಸಿಎಂ ಅಧ್ಯಕ್ಷತೆಯಲ್ಲಿ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರದ ಸಭೆ: ಸಚಿವ ಎನ್‌.ಎಸ್‌ ಭೋಸರಾಜು
KARNATAKA

ಶೀಘ್ರದಲ್ಲೇ ಸಿಎಂ ಅಧ್ಯಕ್ಷತೆಯಲ್ಲಿ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರದ ಸಭೆ: ಸಚಿವ ಎನ್‌.ಎಸ್‌ ಭೋಸರಾಜು

By kannadanewsnow0902/12/2024 6:11 PM

ಬೆಂಗಳೂರು : ಸುಮಾರು 40 ಸಾವಿರ ಜಲಮೂಲಗಳ ವ್ಯಾಪ್ತಿಯನ್ನು ಹೊಂದಿರುವ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರದ ಸಭೆಯನ್ನು ಶೀಘ್ರದಲ್ಲೇ ಸಿಎಂ ಅಧ್ಯಕ್ಷತೆಯಲ್ಲಿ ನಡೆಸಲಾಗುವುದು. ಈ ಹಿನ್ನಲೆಯಲ್ಲಿ ಇಂದು ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿಗಳು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ಜಲಮೂಲಗಳ ಸಂರಕ್ಷಣೆ ಹಾಗೂ ಆದಾಯ ವೃದ್ದಿಗೆ ಇಲಾಖವಾರು ಸಮನ್ವಯಕ್ಕೆ ಸೂಚನೆ ನೀಡಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು.

ಇಂದು ವಿಧಾನಸೌಧದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್‌ ಎಸ್‌ ಭೋಸರಾಜು ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರದ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶಾಲಿನಿ ರಜನೀಶ್‌ ಸೇರಿದಂತೆ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

ಜಲಮೂಲಗಳ ಸಂರಕ್ಷಣೆಗೆ ಆದ್ಯತೆ ನೀಡಿ:

ರಾಜ್ಯದಲ್ಲಿ ಸುಮಾರು 40 ಸಾವಿರ ಜಲಮೂಲಗಳಿವೆ. ಇವುಗಳ ಸಂರಕ್ಷಣೆ ಮತ್ತು ಸಮರ್ಪಕ ನಿರ್ವಹಣೆಯಿಂದ ಅಂತರ್ಜಲವೃದ್ದಿಯಾಗಲಿದೆ. ಈ ನಿಟ್ಟಿನಲ್ಲಿ ಇಲಾಖೆಗಳ ಮಧ್ಯೆ ಸಮನ್ವಯ ಬಹಳ ಮುಖ್ಯ. ಈ ಜಲಮೂಲಗಳ ನಿರ್ವಹಣೆಗೆ ಹಣಕಾಸಿನ ಅಗತ್ಯವಿದೆ. ಈ ನಿಟ್ಟಿನಲ್ಲಿ ಮೀನುಗಾರಿಕೆ, ಪ್ಲೋಟಿಂಗ್‌ ಸೋಲಾರ್‌, ಬೋಟಿಂಗ್‌ ನಂತಹ ಆದಾಯ ಮೂಲಗಳನ್ನು ಗುರುತಿಸಬೇಕು ಎಂದು ಸೂಚನೆ ನೀಡಿದರು.

ಸಿಎಂ ಅಧ್ಯಕ್ಷತೆಯಲ್ಲಿ ಸಭೆ:

ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ. ರಾಜ್ಯದ ಜಲಮೂಲಗಳ ಸಂರಕ್ಷಣೆ ಹಾಗೂ ಅಭಿವೃದ್ದಿಯ ನಿಟ್ಟಿನಲ್ಲಿ ಹಲವಾರು ವಿಷಯಗಳ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ನಿಟ್ಟಿನಲ್ಲಿ ಸಭೆಯನ್ನು ನಡೆಸಲು ತೀರ್ಮಾನಿಸಲಾಯಿತು. ಈ ಸಭೆಯಲ್ಲಿ ಮಂಡಿಸಬೇಕಾದ ವಿಷಯಗಳ ಬಗ್ಗೆ ಅಗತ್ಯ ವರದಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಕಳೆದ ಆಯವ್ಯಯದಲ್ಲಿ ಘೋಷಿಸಿರುವಂತೆ ಕೆರೆ ಬಳಕೆದಾರರ ಸಂಘಗಳನ್ನು ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶಾಲಿನಿ ರಜನೀಶ್‌, ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿಗಳಾದ ರಾಘವನ್‌, ಆರ್ಥಿಕ ಇಲಾಖೆ ಅಧಿಕಾರಿಗಳು, ಕಾನೂನು ಇಲಾಖೆ ಅಧಿಕಾರಿಗಳು, ಸಹಕಾರ ಇಲಾಖೆ ಅಧಿಕಾರಿಗಳು, ನಗರ ಯೋಜನೆ ಹಾಗೂ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತಿರಿದ್ದರು.

ಗ್ಯಾರಂಟಿ ಜೊತೆಗೆ ಅಭಿವೃದ್ದಿಗೂ ಸರ್ಕಾರದ ಒತ್ತು, ಪ್ರತಿಪಕ್ಷಗಳ ಸುಳ್ಳಿಗೆ ಜನರು ಕಿವಿಗೊಡಬೇಡಿ: DKS

BIG NEWS: ಕರ್ನಾಟಕ SSLC, ದ್ವಿತೀಯ PUC ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಹೀಗಿದೆ ವಿಷಯವಾರು ಪರೀಕ್ಷೆ

Share. Facebook Twitter LinkedIn WhatsApp Email

Related Posts

ಹಾಸನದ ಬೆಟ್ಟದ ಭೈರವೇಶ್ವರ ಸನ್ನಿಧಿಯಲ್ಲಿ ಪ್ರಿ-ವೆಡ್ಡಿಂಗ್ ಶೂಟ್ ಅತಿರೇಕ: ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

30/03/2026 2:00 PM1 Min Read

BREAKING : ಗ್ರಾಹಕರ ಜೇಬಿಗೆ ಕತ್ತರಿ : ಯುದ್ಧದ ಪರಿಣಾಮದಿಂದ ನಂದಿನಿ ಉತ್ಪನ್ನಗಳ ದರ ಏರಿಕೆಗೆ ‘KMF’ ಚಿಂತನೆ?

30/03/2026 1:37 PM1 Min Read

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯಾವಳಿ ವೇಳೆ ಕಳ್ಳರ ಕೈಚಳಕ: 50ಕ್ಕೂ ಹೆಚ್ಚು ಮೊಬೈಲ್‌ಗಳು ಮಾಯ!

30/03/2026 1:15 PM2 Mins Read
Recent News

BREAKING : ಸಚಿವಾಲಯದ ಯೂಟರ್ನ್ ಬಳಿಕ ಬಾಂಗ್ಲಾದೇಶದಲ್ಲಿ ‘ಜಿಯೋಸ್ಟಾರ್ ಐಪಿಎಲ್ ಒಪ್ಪಂದ’ ರದ್ದು!

30/03/2026 2:53 PM

‘ಡಿ-ಮಾರ್ಟ್’ ದೈತ್ಯರನ್ನ ಸೋಲಿಸಿದ್ದು ಹೇಗೆ.? ಎಷ್ಟೇ ಬುದ್ಧಿವಂತರಿದ್ರು ಈ ತಂತ್ರಕ್ಕೆ ಬೀಳಲೇಬೇಕು, ಮಾಯಜಾಲದ ಹಿಂದಿನ ಸತ್ಯವಿದು!

30/03/2026 2:47 PM

ಏ.1ರಿಂದ ದೇಶಾದ್ಯಂತ ‘ಡಿಜಿಟಲ್ ಜನಗಣತಿ’ ಆರಂಭ! ನಿಮ್ಮ ‘ಮೊಬೈಲ್‌’ನಲ್ಲೇ ಹೀಗೆ ಮಾಹಿತಿಯನ್ನು ದಾಖಲಿಸಿ!

30/03/2026 2:45 PM

ಘನತೆಯಿಂದ ಬದುಕುವ ಹಕ್ಕು ಎಲ್ಲರಿಗೂ ಇದೆ: ತೃತೀಯಲಿಂಗಿ ವ್ಯಕ್ತಿಗಳ ಸ್ವಯಂ ಗುರುತಿಸುವಿಕೆಗೆ ಹೈಕೋರ್ಟ್ ಮಾನ್ಯತೆ

30/03/2026 2:31 PM
State News
KARNATAKA

ಹಾಸನದ ಬೆಟ್ಟದ ಭೈರವೇಶ್ವರ ಸನ್ನಿಧಿಯಲ್ಲಿ ಪ್ರಿ-ವೆಡ್ಡಿಂಗ್ ಶೂಟ್ ಅತಿರೇಕ: ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

By kannadanewsnow0930/03/2026 2:00 PM KARNATAKA 1 Min Read

ಬೆಂಗಳೂರು: ಹಾಸನ ಜಿಲ್ಲೆಯ ಸಕಲೇಶಪುರದ ಐತಿಹಾಸಿಕ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದ ಪ್ರಿ-ವೆಡ್ಡಿಂಗ್ ಫೋಟೋ ಶೂಟ್ ವೇಳೆ ಉಂಟಾದ…

BREAKING : ಗ್ರಾಹಕರ ಜೇಬಿಗೆ ಕತ್ತರಿ : ಯುದ್ಧದ ಪರಿಣಾಮದಿಂದ ನಂದಿನಿ ಉತ್ಪನ್ನಗಳ ದರ ಏರಿಕೆಗೆ ‘KMF’ ಚಿಂತನೆ?

30/03/2026 1:37 PM

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯಾವಳಿ ವೇಳೆ ಕಳ್ಳರ ಕೈಚಳಕ: 50ಕ್ಕೂ ಹೆಚ್ಚು ಮೊಬೈಲ್‌ಗಳು ಮಾಯ!

30/03/2026 1:15 PM

BIG NEWS : ತುಮಕೂರಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಬೈಕ್ ನಿಂದ ಬಿದ್ದು ಇಬ್ಬರು ಯುವಕರು ಸಾವು!

30/03/2026 1:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.