ಶಿವಮೊಗ್ಗ : ರಾಜ್ಯದಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಮುಂದುವರೆದಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ 2 ದಿನಗಳು ದಿನಾಂಕ: 03-12-2024 ರಂದು ಆರೆಂಜ್ ಅಲರ್ಟ್ ಹಾಗೂ ದಿನಾಂಕ: 04-12-2024 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಹಿಸಬೇಕಿದ್ದು ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಮತ್ತು ಅಂಗನವಾಡಿಗಳಿಗೆ ಡಿಸೆಂಬರ್ 3 ರ ಇಂದು ರಜೆ ಘೋಷಿಸಿ ಆದೇಶಿಸಲಾಗಿದೆ.