ಮೈಸೂರು : ಚಲಿಸುತ್ತಿದ್ದಂತಹ ಕೆಎಸ್ಆರ್ಟಿಸಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್‍ಡಿ ಕೋಟೆ ತಾಲೂಕಿನ ನಡಾಡಿ ಗ್ರಾಮದಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಬಸ್ನಲ್ಲಿ ಸಂಚರಿಸುತ್ತಿದ್ದ ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜಿಲ್ಲೆಯ ಎಚ್ ಡಿ ಕೋಟೆ ಘಟಕಕ್ಕೆ ಸೇರಿದ KSRTC ಸಾರಿಗೆ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದೇವಲಾಪುರ ಜಕ್ಕಹಳ್ಳಿ ಗ್ರಾಮದ ಮಾರ್ಗ ಮದ್ಯ ಈ ಘಟನೆ ನಡೆದಿದೆ. ನಡಾಡಿ ಗ್ರಾಮದಿಂದ ಎಚ್ ಡಿ ಕೋಟೆಗೆ ಈ ಒಂದು ಬಸ್ ತೆರಳುತ್ತಿತ್ತು. ಎಚ್ ಡಿ ಕೋಟೆ ಘಟಕಕ್ಕೆ ಸೇರಿದ ಸಾರಿಗೆ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.ಬಸ್ ನಲ್ಲಿದ್ದ ಸುಮಾರು 50 ಕ್ಕೂ ಹೆಚ್ಚು ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.