ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿ, ಇಸ್ಪಿಡ್ ಆಡುತ್ತಿದ್ದಂತವರ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ 10 ಮಂದಿ ಬಂದಿಸಿ, ಅವರಿಂದ ನಗದು ಕೂಡ ಜಪ್ತಿ ಮಾಡಿ, ಎಫ್ಐಆರ್ ದಾಖಲಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಆಲೂರು ಗ್ರಾಮದ ಬಳಿಯಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿರುವಂತ ಖಚಿತ ಮಾಹಿತಿ ಡಿವೈಎಸ್ಪಿ ಅವರಿಗೆ ಸಿಕ್ಕಿತ್ತು. ಕೂಡಲೇ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಕಾಳಿ ಕೃಷ್ಣ ಅವರಿಗೆ ಕ್ರಮಕ್ಕೆ ಸೂಚಿಸಿದ್ದರು. ಹೀಗಾಗಿ ಗ್ರಾಮಾಂತರ ಠಾಣೆಯ ಪಿಎಸ್ಐ ಮಹೇಶ್ ಗೌಡ ನೇತೃತ್ವದಲ್ಲಿ ಸಿಬ್ಬಂದಿಗಳ ಜೊತೆಗೂಡಿ ದಾಳಿಯನ್ನು ನಡೆಸಲಾಗಿದೆ.
ಈ ದಾಳಿಯ ವೇಳೆ ಆಲೂರು ಗ್ರಾಮದ ಬಳಿಯಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದಂತ 10 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಿಂದ ರೂ.18,400 ಹಣವನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿರುವುದಾಗಿ ಕನ್ನಡ ನ್ಯೂಸ್ ನೌಗೆ ಪಿಐ ಕಾಳಿ ಕೃಷ್ಣ ಮಾಹಿತಿ ನೀಡಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ