ನವದೆಹಲಿ : ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ವಿಚಾರವಾಗಿ ಶಾಸಕ ಯತ್ನಾಳ್ಗೆ ಬಿಜೆಪಿಯ ಕೇಂದ್ರ ಶಿಸ್ತು ಸಮಿತಿ ನೋಟಿಸ್ ನೀಡಿತ್ತು. ಇಂದು ನವದೆಹಲಿಯಲ್ಲಿ ಕೇಂದ್ರ ಶಿಸ್ತು ಸಮಿತಿಯ ಅಧ್ಯಕ್ಷ ಓಂ ಪಾಟಕ್ ಅವರನ್ನು ಭೇಟಿಯಾದ ಯತ್ನಾಳ್ ಅವರು ಸುಮಾರು 6 ಪುಟಗಳಷ್ಟು ಉತ್ತರವನ್ನು ನೀಡಿದ್ದಾರೆ.ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ಪಕ್ಷದ ಆಂತರಿಕ ವಿಚಾರದಲ್ಲಿ ಗಮನ ಕೊಡಬೇಡಿ ಅಂತ ಹೇಳಿದ್ದಾರೆ ಎಂದು ತಿಳಿಸಿದರು.
ಆಂತರಿಕ ವಿಚಾರ ಹೊರಗೆ ಮಾತನಾಡಬೇಡಿ ಎಂದಿದ್ದಾರೆ. ದೆಹಲಿಯಲ್ಲಿ ನಾನು ಅಧ್ಯಕ್ಷರನ್ನ ಭೇಟಿ ಮಾಡಿದ್ದೆ. ಅಧ್ಯಕ್ಷರಿಗೆ ಒಂದು ಗಂಟೆ ಕಾಲ ವಿವರಣೆ ಕೊಟ್ಟಿದ್ದೇನೆ. ಪಕ್ಷದ ಆಂತರಿಕ ವಿಚಾರದಲ್ಲಿ ಗಮನ ಕೊಡಬೇಡಿ. ಕಾಂಗ್ರೆಸ್ ವಿರುದ್ಧದ ಹೋರಾಟಕ್ಕೆ ಗಮನ ಕೊಡಿ. ವರಿಷ್ಠರು ಹೀಗೆ ಅಂತ ನಮಗೆ ಹೇಳಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.
1 ಗಂಟೆ 15 ನಿಮಿಷ ಕಾಲ ಎಲ್ಲ ಸವಿಸ್ತಾರವಾಗಿ ಹೇಳಿದ್ದೇನೆ ನಾನು ಹೇಳಿರುವ ಎಲ್ಲವನ್ನು ಸ್ವೀಕರಿಸಿದ್ದಾರೆ. ಪಕ್ಷದ ಹಿತದ ದೃಷ್ಟಿಯಿಂದ ಎಲ್ಲಾ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಾರೆ ವಕ್ಫ್ ವಿರುದ್ಧದ ಹೋರಾಟಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಪಕ್ಷದ ಸಂಘಟನೆಯಿಂದ ಕೆಲಸ ಮಾಡಿ ಅಂತ ಹೇಳಿದ್ದಾರೆ. ನಿಮ್ಮ ಭಾವನೆಗಳನ್ನು ನಾಯಕರ ಗಮನಕ್ಕೆ ತರುವುದಾಗಿ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತರುತ್ತೇನೆ ಅಂತ ಹೇಳಿದ್ದಾರೆ ಎಂದು ಯತ್ನಾಳ್ ತಿಳಿಸಿದರು.