Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಂಕಷ್ಟದ ಸಮಯದಲ್ಲಿ ಶ್ರೀಲಂಕಾಕ್ಕೆ ಭಾರತದ ನೆರವು: 38,000 ಮೆಟ್ರಿಕ್ ಟನ್ ಇಂಧನ ಪೂರೈಕೆ!

29/03/2026 9:54 PM
nitish kumar

ಬಿಹಾರ ರಾಜಕೀಯದಲ್ಲಿ ಸಂಚಲನ: ನಾಳೆ ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ?

29/03/2026 9:12 PM

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

29/03/2026 8:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ `BPL ಕಾರ್ಡ್ APL’ ಗೆ ಬದಲಾಗಿದೆ ಅಷ್ಟೆ : CM ಸಿದ್ದರಾಮಯ್ಯ ಸ್ಪಷ್ಟನೆ.!
KARNATAKA

BIG NEWS : ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ `BPL ಕಾರ್ಡ್ APL’ ಗೆ ಬದಲಾಗಿದೆ ಅಷ್ಟೆ : CM ಸಿದ್ದರಾಮಯ್ಯ ಸ್ಪಷ್ಟನೆ.!

By kannadanewsnow5705/12/2024 6:25 AM

ಕೆ.ಆರ್.ಪೇಟೆ: ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡವನ್ನು ಉದ್ಘಾಟಿಸಿ ಹಲವು ಫಲಾನುಭವಿಗಳಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿದರು. GDP ಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್. ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ. ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು. ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು ಎಂದರು.

ಕೈಗಾರಿಕೋದ್ಯಮಿಗಳು ಅವರು ತಯಾರಿಸಿದ ವಸ್ತುಗೆ ಅವರೇ ಬೆಲೆ ನಿಗಧಿ ಮಾಡ್ತಾರೆ. ಇದೇ ಅಧಿಕಾರ ನಮ್ಮ‌ ರೈತರಿಗೂ ಸಿಗಬೇಕು. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಒಕ್ಕೂಟ ವ್ಯವಸ್ಥೆ ಯಶಸ್ವಿ ಆಗಬೇಕಾದರೆ ದೇಶದ 140 ಕೋಟಿ ಜನರಿಗೂ ಸಕಲ ಸಹಕಾರ ಕೊಡಬೇಕು. ನಮ್ಮ ರೈತ ಸಮುದಾಯಕ್ಕೆ ಬೆಲೆ ಫಿಕ್ಸ್ ಮಾಡುವ ಅಧಿಕಾರ ಬರಬೇಕು. ಆಗ ತಾರತಮ್ಯ ನಿವಾರಣೆ ಆಗುತ್ತದೆ ಎಂದರು.

ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ. ತೆರಿಗೆ ಕಟ್ಟುವವರಿಗೆ ಅನ್ನಭಾಗ್ಯದ ಅಗತ್ಯ ಇಲ್ಲ ಅಲ್ಲವೇ ಎಂದು ಪ್ರಶ್ನಿಸಿದರು. ಈ ದೇಶಕ್ಕೆ ಸಿಕ್ಕ ರಾಜಕೀಯ ಸ್ವಾತಂತ್ರ್ಯ ಯಶಸ್ವಿ ಆಗಬೇಕಾದರೆ, ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗಬೇಕು ಎನ್ನುವ ಅಂಬೇಡ್ಕರ್ ಅವರ ಮಾತನ್ನು ಉಲ್ಲೇಖಿಸಿ ಈ ಕಾರಣಕ್ಕೇ ನಾವು ಅನ್ನ ಭಾಗ್ಯ ಮತ್ತು ಆರ್ಥಿಕ ಶಕ್ತಿ ಕೊಡುವ ಐದೈದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ ಎಂದರು.

ಬಡ ಕುಟುಂಬದವರ ಮತ್ತು ನಮ್ಮ ಹೆಣ್ಣು ಮಕ್ಕಳ ಹಣ ಉಳಿತಾಯ ಆಗಲಿ ಎನ್ನುವ ಕಾರಣದಿಂದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಯೋಜನೆಗಳನ್ನು ನಮ್ಮ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ ಎಂದರು‌. ಕೈಯಲ್ಲಿ ಕಾಸಿದ್ದರೆ ತಾನೆ ನಮ್ಮ ಜನ ಖರೀದಿಗೆ ಹೋಗೋದು. ಅದಕ್ಕೇ ಜನರ ಕೈಯಲ್ಲಿ ಕಾಸು ಇರುವ ಯೋಜನೆ ಜಾರಿ ಮಾಡಿದ್ದೇವೆ ಎಂದರು.

ಕೆ.ಆರ್.ಪೇಟೆ ರಸ್ತೆ, ಕೆರೆ, ಸೇತುವೆಗೆ ಹಣ ಕೊಡ್ತೀನಿ

ಕೆ.ಆರ್.ಪೇಟೆಯಲ್ಲಿ ಹಾಳಾಗಿರುವ ರಸ್ತೆ, ಕೆರೆ, ಸೇತುವೆಗೆ ಹಣ ಕೊಡಬೇಕು ಎನ್ನುವ ಮನವಿ ಬಂದಿದೆ. ನಾವು ಬೇಡಿಕೆಗೆ ತಕ್ಕಷ್ಟು ಹಣವನ್ನು ಖಂಡಿತಾ ಬಿಡುಗಡೆ ಮಾಡ್ತೀನಿ ಎಂದು ಭರವಸೆ ನೀಡಿದರು.‌

ದಿನಕ್ಕೆ 5 ಕೋಟಿ ಹಾಲು ಉತ್ಪಾದಕರಿಗೆ ಕೊಡ್ತಾ ಇದ್ದೀವಿ

ರಾಜ್ಯದಲ್ಲಿ ಪ್ರತೀ ಲೀಟರ್ ಹಾಲಿಗೆ 5 ರೂಪಾಯಿ ಸಹಾಯ ಧನ ಜಾರಿ ಮಾಡಿದ್ದು ನಾವು. ದಿನಕ್ಕೆ ರಾಜ್ಯದಲ್ಲಿ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಅಂದರೆ ಪ್ರತೀ ದಿನ 5 ಕೋಟಿ ರೂಪಾಯಿಯನ್ನು ಹಾಲು ಉತ್ಪಾದಕರಿಗೆ ಕೊಡುತ್ತಿದ್ದೇವೆ ಎಂದು ಲೆಕ್ಕ ವಿವರಿಸಿದರು.

BIG NEWS : ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ `BPL ಕಾರ್ಡ್ APL' ಗೆ ಬದಲಾಗಿದೆ ಅಷ್ಟೆ : CM ಸಿದ್ದರಾಮಯ್ಯ ಸ್ಪಷ್ಟನೆ.! BIG NEWS: BPL card of ineligible people has been changed to APL only to ensure that people like me don't get annabhagya: CM Siddaramaiah
Share. Facebook Twitter LinkedIn WhatsApp Email

Related Posts

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

29/03/2026 8:35 PM2 Mins Read

Rain Alert: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

29/03/2026 8:31 PM1 Min Read

ಬೆಂಗಳೂರಲ್ಲಿ ಬಳಿ ಸರಣಿ ಅಪಘಾತ: ಆಕ್ರೋಶಗೊಂಡ ಸಾರ್ವಜನಿಕರಿಂದ ಕೆಎಸ್‌ಆರ್‌ಟಿಸಿ ಚಾಲಕನಿಗೆ ಧರ್ಮದೇಟು

29/03/2026 8:05 PM1 Min Read
Recent News

ಸಂಕಷ್ಟದ ಸಮಯದಲ್ಲಿ ಶ್ರೀಲಂಕಾಕ್ಕೆ ಭಾರತದ ನೆರವು: 38,000 ಮೆಟ್ರಿಕ್ ಟನ್ ಇಂಧನ ಪೂರೈಕೆ!

29/03/2026 9:54 PM
nitish kumar

ಬಿಹಾರ ರಾಜಕೀಯದಲ್ಲಿ ಸಂಚಲನ: ನಾಳೆ ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ?

29/03/2026 9:12 PM

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

29/03/2026 8:35 PM

Rain Alert: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

29/03/2026 8:31 PM
State News
KARNATAKA

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

By kannadanewsnow0929/03/2026 8:35 PM KARNATAKA 2 Mins Read

ಚಿಕ್ಕಮಗಳೂರು: “ಕಡಿಮೆ ಹೂಡಿಕೆ, ಅಲ್ಪ ಅವಧಿಯಲ್ಲಿ ಕೋಟಿ ಕೋಟಿ ಲಾಭ” – ಇಂತಹ ಆಕರ್ಷಕ ಜಾಹೀರಾತುಗಳು ಅಥವಾ ವಾಟ್ಸಾಪ್ ಸಂದೇಶಗಳು…

Rain Alert: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

29/03/2026 8:31 PM

ಬೆಂಗಳೂರಲ್ಲಿ ಬಳಿ ಸರಣಿ ಅಪಘಾತ: ಆಕ್ರೋಶಗೊಂಡ ಸಾರ್ವಜನಿಕರಿಂದ ಕೆಎಸ್‌ಆರ್‌ಟಿಸಿ ಚಾಲಕನಿಗೆ ಧರ್ಮದೇಟು

29/03/2026 8:05 PM

ಸಾಗರದಲ್ಲಿ ಕೌಟುಂಬಿಕ ಕಲಹಕ್ಕೆ ಮನನೊಂದು ಸ್ಟಾಫ್ ನರ್ಸ್ ಆತ್ಮಹತ್ಯೆ ಯತ್ನ, ಸ್ಥಿತಿ ಗಂಭೀರ

29/03/2026 8:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.