ಬೆಂಗಳೂರು: ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇಕಡ 2% ರಷ್ಟು ಹುದ್ದೆಗಳನ್ನು ಮೀಸಲಿರಿಸಿ ಹೊರಡಿಸಲಾಗಿರುವ ದಿನಾಂಕ: 18.09.2024ರ ಅಧಿಸೂಚನೆ ಅನ್ವಯ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚನೆಗಳನ್ನು ನೀಡಿರುವ ಬಗ್ಗೆ ರಾಜ್ಯ ಸರ್ಕಾರದಿಂದ ಆದೇಶವನ್ನು ಹೊರಡಿಸಲಾಗಿದೆ.
ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ದಿನಾಂಕ:18.09.2024ರ ಅಧಿಸೂಚನ ಅನ್ವಯ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚನೆಗಳನ್ನು ನೀಡುವ ಬಗ್ಗೆ. ದಿನಾಂಕ:18.09.2024ರ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಆಸುಇ 295 ಸೇನನಿ 2023ರಲ್ಲಿ ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿ ಸದರಿ ನಿಯಮದ ಉಪ-ನಿಯಮ (1) ಖಂಡ (1D) ನಂತರ (1E) ಯನ್ನು ಸೇರ್ಪಡೆಗೊಳಿಸಿ, ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರೆ ಹಿಂದುಳಿದ ವರ್ಗಗಳ ಪತಿಯೊಂದು ಪುವರ್ಗದಿಂದಲೂ ಎಲ್ಲಾ ಇಲಾಖೆಗಳ ಮಂಜೂರಾದ ವೃಂದ ಬಲದಲ್ಲಿ ಶೇಕಡ 2% ರಷ್ಟು ಹುದ್ದೆಗಳನ್ನು ಕ್ರೀಡಾ ಸಾಧಕರಿಗೆ ಮೀಸಲಿರಿಸಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ.ಆದರೆ, ಸರ್ಕಾರವುಕರ್ನಾಟಕದಿನಾಂಕ:18.09.2024ರ ಅಧಿಸೂಚನೆಯನ್ವಯ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 9ಕ್ಕೆ, ತಿದ್ದುಪಡಿ ಮಾಡಿರುವುದನ್ನು ಪುನರ್ ಪರಿಶೀಲಿಸಲಾಗುತ್ತಿದೆ. ಆದುದರಿಂದ ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇಕಡ 2% ರಷ್ಟು ಹುದ್ದೆಗಳನ್ನು ಮೀಸಲಿರಿಸಿ ಹೊರಡಿಸಲಾಗಿರುವ ದಿನಾಂಕ:18.09.2024ರ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆಹಿಡಿಯಲಾಗಿದೆ ಎಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಈ ಮೂಲಕ ಸೂಚಿಸಲಾಗಿದೆ ಅಂಥ ತಿಳಿಸಿದೆ.