ಬೆಂಗಳೂರು : ಜನರು ಸೇವಿಸುವ ಆಹಾರದಲ್ಲಿ ಕಲುಷಿತ, ವಿಷಕಾರಿ ಅಥವಾ ಇನ್ನಿತರ ಯಾವುದೇ ರಾಸಾಯನಿಕಗಳು ಬೆರೆತಿರುವುದು ಕಂಡು ಬಂದರೆ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ಆಹಾರ ಪ್ರಯೋಗಾಲಯಕ್ಕೆ ಭೇಟಿ ನೀಡಿ ಆಹಾರ ಸುರಕ್ಷತಾ ಗುಣಮಟ್ಟ ಪರೀಕ್ಷಿಸುವ ವಿಧಾನವನ್ನು ಪರಿಶೀಲಿಸಿದ್ದಾರೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ಪ್ರತಿನಿತ್ಯ ಸೇವಿಸಲ್ಪಡುವ ಆಹಾರ ಪದಾರ್ಥಗಳ ಪರೀಕ್ಷೆ ನಡೆಸಲು ನಮ್ಮ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಈಗಾಗಲೇ ಕಾಟನ್ ಕ್ಯಾಂಡಿ, ಗೋಬಿ ಮಂಚೂರಿ ಸೇರಿದಂತೆ ಇನ್ನಿತರ ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣದ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಜನರು ಸೇವಿಸುವ ಆಹಾರದಲ್ಲಿ ಕಲುಷಿತ, ವಿಷಕಾರಿ ಅಥವಾ ಇನ್ನಿತರ ಯಾವುದೇ ರಾಸಾಯನಿಕಗಳು ಬೆರೆತಿರುವುದು ಕಂಡು ಬಂದರೆ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.