ಹಾಸನ : ಮುಂದಿನ ವಿಧಾನಸಭಾ ಚುನಾವಣೆಯವರಿಗೂ ಅಂದರೆ 2028 ರವರೆಗೆ ರಾಜ್ಯದಲ್ಲಿ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. 2028ರಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಹಾಸನದಲ್ಲಿ ಜನ ಕಲ್ಯಾಣ ಮೃತ್ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಬಡ ಜನರಿಗೋಸ್ಕರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಆದರೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಶಿವಲಿಂಗೇಗೌಡ ಒಬ್ಬರೇ ಗೆಲುವು ಸಾಧಿಸಿದ್ದರು. ಆದರೆ 2028 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳನ್ನು ಹಾಗೂ ಲೋಕಸಭೆಯ ಎಲ್ಲ ಸ್ಥಾನಗಳನ್ನು ಕೂಡ ಗೆಲ್ಲುತ್ತೇವೆ. ಕಾಂಗ್ರೆಸ್ ಪಕ್ಷ ಇಡೀ ದೇಶದಲ್ಲಿ ಬಲಿಷ್ಠವಾಗಿದೆ ಎಂದು ತಿಳಿಸಿದರು.