ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ 2 ಚಿತ್ರದ ಬಿಡುಗಡೆಯ ಸಂದರ್ಭದಲ್ಲಿ ಮಧ್ಯಪ್ರದೇಶದ ಬೇತುಲ್‌ನಲ್ಲಿ ಭಾರಿ ಕೋಲಾಹಲ ಉಂಟಾಗಿತ್ತು. ಚಿತ್ರ ವೀಕ್ಷಿಸಲು ಬಂದಿದ್ದ ಎರಡು ಗುಂಪುಗಳ ನಡುವೆ ಚಿತ್ರಮಂದಿರದಲ್ಲಿ ಜಗಳ ನಡೆದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಬೇತುಲ್‌ನ ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಂತಿಶಿವ ಮಲ್ಟಿಪ್ಲೆಕ್ಸ್‌ನಲ್ಲಿ ಪುಷ್ಪಾ-2 ಪ್ರದರ್ಶನದ ವೇಳೆ, ಚಿತ್ರಮಂದಿರದಲ್ಲಿ ಎರಡು ಗುಂಪುಗಳ ನಡುವೆ ವಾಗ್ವಾದ ನಡೆಯಿತು. ಕ್ರಮೇಣ ವಿವಾದ ವಿಕೋಪಕ್ಕೆ ಹೋಗಿದ್ದು, ಎರಡೂ ಗುಂಪಿನವರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಚಿತ್ರಮಂದಿರದಲ್ಲಿ ಇದ್ದ ಇತರ ಪ್ರೇಕ್ಷಕರು ಮಧ್ಯಪ್ರವೇಶಿಸಲು ಪ್ರಯತ್ನಿಸಿದರು ಮತ್ತು ವಿವಾದವನ್ನು ಶಾಂತಗೊಳಿಸಲಾಯಿತು. ಎರಡೂ ಗುಂಪಿನ ಜನರು ಚಿತ್ರ ನೋಡದೆ ವಾಪಸ್ ಹೋದರು. ಈ ಬಗ್ಗೆ ಪೊಲೀಸರಲ್ಲಿಯೂ ದೂರು ಬಂದಿರಲಿಲ್ಲ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಚಿತ್ರಮಂದಿರದೊಳಗೆ ಎರಡೂ ಗುಂಪುಗಳು ಪರಸ್ಪರ ಹಲ್ಲೆ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಬಹುದು. ಪ್ರೇಕ್ಷಕರು ಮತ್ತು ಸಿಬ್ಬಂದಿ ಅವರನ್ನು ತಡೆಯಲು ಪ್ರಯತ್ನಿಸಿದ್ದಾರೆ.